ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಡೆಯಲಿದೆ.
ಡಿಸೆಂಬರ್ 17ರಂದು ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಡಿಸೆಂಬರ್ 18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಡಿಸೆಂಬರ್ 21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…