ಜಾಗೃತಿಯಿಂದ ಏಡ್ಸ್ ಪ್ರಮಾಣ ಇಳಿಮುಖ: ಸುರೇಶ್ ಬಿ.

ವಿದ್ಯಾರ್ಥಿ ದೆಸೆಯಲ್ಲಿಯೇ ಮಾರಕ ರೋಗ ಏಡ್ಸ್ ಬಗ್ಗೆ ಮಾಹಿತಿ ಪಡೆದುಕೊಂಡರೆ ಭವಿಷ್ಯತ್ತಿನಲ್ಲಿ ಬರಬಹುದಾದ ಆರೋಗ್ಯದ ಸಮಸ್ಯೆಗಳ ಅರಿವು ಮೂಡುತ್ತದೆ. ಆರೋಗ್ಯ ಕಾಳಜಿ , ಸ್ವಚ್ಛತೆ ಮತ್ತು ಜಾಗೃತಿ ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯ. ಭಯಾನಕ ರೋಗ ಏಡ್ಸ್ ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ ಕಾರಣ ಇಂದು ಗಣನೀಯ ಪ್ರಮಾಣದಲ್ಲಿ ನಿಯಂತ್ರಣ ಸಾಧ್ಯವಾಗಿದೆ.   ಹಾಗೆಯೇ ಮುಂದಿನ ಆರೋಗ್ಯಯುತ ಸಮಾಜದ ಬಗ್ಗೆ ಇಂದೇ ಯೋಚಿಸಿ ಜಾಗೃತರಾಗಬೇಕು ಎಂದು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಸುರೇಶ್ ಬಿ ಹೇಳಿದರು.

ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣಾ ತಡೆಗಟ್ಟುವ ಘಟಕ ಮಂಗಳೂರು, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿಯವರ ಕಚೇರಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನ 2024 ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ ಬಂಟ್ವಾಳ ತಾಲೂಕು ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಅಶೋಕ್ ಕುಮಾರ್ ರೈ ಮಾತನಾಡಿ, ಈ ವರ್ಷದ ಘೋಷವಾಕ್ಯ “ಸರಿಯಾದ ಮಾರ್ಗದಲ್ಲಿ ಹಕ್ಕುಗಳನ್ನು ಪಡೆಯೋಣ, ನಮ್ಮ ಆರೋಗ್ಯ ನಮ್ಮ ಹಕ್ಕು ಎಂಬ ವಿಷಯವನ್ನು ಪ್ರಸ್ತಾಪಿಸಿ, ಪ್ರತಿಯೊಬ್ಬರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮೂಡಿ ಜಾಗೃತರಾದಾಗ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಆರೋಗ್ಯ ಇಲಾಖೆ ನಿವೃತ್ತ ಅಧಿಕಾರಿ ಜಯರಾಮ ಪೂಜಾರಿ ಏಡ್ಸ್ ಜಾಗೃತಿಯ ಬಗ್ಗೆ ಉಪನ್ಯಾಸ ನೀಡಿದರು. ಡಾ  ಶ್ರೀಶಾನಂದ ಪಿಜಿ ಇನ್ ಕಮ್ಯುನಿಟಿ ಮೆಡಿಸಿನ್ ಮತ್ತು ಉಪನ್ಯಾಸಕ ಬಾಲಕೃಷ್ಣ ನಾಯ್ಕ್ ಕೆ ಬೆಳ್ಳಾರೆ, ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಜೀಪಮೂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ರೋಹಿಣಿ ಮತ್ತು ಆಶಾ ಕಾರ್ಯಕರ್ತೆ ಪುಷ್ಪ ಸಹಕರಿಸಿದರು. ಕಾಲೇಜಿನ ಉಪನ್ಯಾಸಕರಾದ ಬಾಲಕೃಷ್ಣ ಎನ್ ವಿ, ಭಾರತಿ, ಗಾಯತ್ರಿ, ಶೋಭಾ, ಯಶೋಧ ಮತ್ತು ಗುಮಾಸ್ತರಾದ ಲತಾ ಉಪಸ್ಥಿತರಿದ್ದರು. ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕೇಂದ್ರ ತಾಲೂಕು ಆಸ್ಪತ್ರೆ ಬಂಟ್ವಾಳ ಆಪ್ತ ಸಮಾಲೋಚಕಿ ಅಕ್ಷತಾ ಸ್ವಾಗತಿಸಿದರು. ತಾಲೂಕು ಆಸ್ಪತ್ರೆ ಬಂಟ್ವಾಳ ಐಸಿಟಿಸಿ ಆಪ್ತಸಮಾಲೋಚಕರಾದ ವಾಣಿ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜಾಗೃತಿಯಿಂದ ಏಡ್ಸ್ ಪ್ರಮಾಣ ಇಳಿಮುಖ: ಸುರೇಶ್ ಬಿ."

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*