ವಿದ್ಯಾರ್ಥಿ ದೆಸೆಯಲ್ಲಿಯೇ ಮಾರಕ ರೋಗ ಏಡ್ಸ್ ಬಗ್ಗೆ ಮಾಹಿತಿ ಪಡೆದುಕೊಂಡರೆ ಭವಿಷ್ಯತ್ತಿನಲ್ಲಿ ಬರಬಹುದಾದ ಆರೋಗ್ಯದ ಸಮಸ್ಯೆಗಳ ಅರಿವು ಮೂಡುತ್ತದೆ. ಆರೋಗ್ಯ ಕಾಳಜಿ , ಸ್ವಚ್ಛತೆ ಮತ್ತು ಜಾಗೃತಿ ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯ. ಭಯಾನಕ ರೋಗ ಏಡ್ಸ್ ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ ಕಾರಣ ಇಂದು ಗಣನೀಯ ಪ್ರಮಾಣದಲ್ಲಿ ನಿಯಂತ್ರಣ ಸಾಧ್ಯವಾಗಿದೆ. ಹಾಗೆಯೇ ಮುಂದಿನ ಆರೋಗ್ಯಯುತ ಸಮಾಜದ ಬಗ್ಗೆ ಇಂದೇ ಯೋಚಿಸಿ ಜಾಗೃತರಾಗಬೇಕು ಎಂದು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಸುರೇಶ್ ಬಿ ಹೇಳಿದರು.
ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣಾ ತಡೆಗಟ್ಟುವ ಘಟಕ ಮಂಗಳೂರು, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿಯವರ ಕಚೇರಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನ 2024 ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಬಂಟ್ವಾಳ ತಾಲೂಕು ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಅಶೋಕ್ ಕುಮಾರ್ ರೈ ಮಾತನಾಡಿ, ಈ ವರ್ಷದ ಘೋಷವಾಕ್ಯ “ಸರಿಯಾದ ಮಾರ್ಗದಲ್ಲಿ ಹಕ್ಕುಗಳನ್ನು ಪಡೆಯೋಣ, ನಮ್ಮ ಆರೋಗ್ಯ ನಮ್ಮ ಹಕ್ಕು ಎಂಬ ವಿಷಯವನ್ನು ಪ್ರಸ್ತಾಪಿಸಿ, ಪ್ರತಿಯೊಬ್ಬರಲ್ಲಿ ಆರೋಗ್ಯದ ಬಗ್ಗೆ ಕಾಳಜಿ ಮೂಡಿ ಜಾಗೃತರಾದಾಗ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಆರೋಗ್ಯ ಇಲಾಖೆ ನಿವೃತ್ತ ಅಧಿಕಾರಿ ಜಯರಾಮ ಪೂಜಾರಿ ಏಡ್ಸ್ ಜಾಗೃತಿಯ ಬಗ್ಗೆ ಉಪನ್ಯಾಸ ನೀಡಿದರು. ಡಾ ಶ್ರೀಶಾನಂದ ಪಿಜಿ ಇನ್ ಕಮ್ಯುನಿಟಿ ಮೆಡಿಸಿನ್ ಮತ್ತು ಉಪನ್ಯಾಸಕ ಬಾಲಕೃಷ್ಣ ನಾಯ್ಕ್ ಕೆ ಬೆಳ್ಳಾರೆ, ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಜೀಪಮೂಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ರೋಹಿಣಿ ಮತ್ತು ಆಶಾ ಕಾರ್ಯಕರ್ತೆ ಪುಷ್ಪ ಸಹಕರಿಸಿದರು. ಕಾಲೇಜಿನ ಉಪನ್ಯಾಸಕರಾದ ಬಾಲಕೃಷ್ಣ ಎನ್ ವಿ, ಭಾರತಿ, ಗಾಯತ್ರಿ, ಶೋಭಾ, ಯಶೋಧ ಮತ್ತು ಗುಮಾಸ್ತರಾದ ಲತಾ ಉಪಸ್ಥಿತರಿದ್ದರು. ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕೇಂದ್ರ ತಾಲೂಕು ಆಸ್ಪತ್ರೆ ಬಂಟ್ವಾಳ ಆಪ್ತ ಸಮಾಲೋಚಕಿ ಅಕ್ಷತಾ ಸ್ವಾಗತಿಸಿದರು. ತಾಲೂಕು ಆಸ್ಪತ್ರೆ ಬಂಟ್ವಾಳ ಐಸಿಟಿಸಿ ಆಪ್ತಸಮಾಲೋಚಕರಾದ ವಾಣಿ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.