ಬಂಟ್ವಾಳ

ಕೆಮ್ಮಾನುಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ

ಬಂಟ್ವಾಳ: ಊರಿನ ಶಾಲೆಯ ಅಭಿವೃದ್ಧಿಯ ಜವಾಬ್ದಾರಿ ಆ ಊರಿನ ಸಮುದಾಯದವರದ್ದೇ ಆಗಿರುತ್ತದೆ, ಶಾಲೆಯ ಏಳಿಗೆಗೆ ಶ್ರಮಿಸುವುದು ಶಾಲಾ ಪೋಷಕರ ಮತ್ತು ಆ ಊರಿನ ಜನರ ಕರ್ತವ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಜಾಹೀರಾತು

ಕೆಮ್ಮಾನುಪಲ್ಕೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಆಹ್ವಾನಿತರಾಗಿ ಮಾತನಾಡಿದರು.

ಕರ್ನಾಟಕದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹ ಯೋಜನೆಯನ್ನು ಅಂದಿನ ಮುಖ್ಯಮಂತ್ರಿಯಾದ ಎಸ್ ಎಂ ಕೃಷ್ಣರವರು ಯೋಜಿಸಿದ್ದು ಇಂದು ಅದು ಬಹಳಷ್ಟು ಪ್ರಯೋಜನಕಾರಿಯಾಗಿ ಬೆಳೆದಿದೆ. ಎಂದವರು ಹೇಳಿದರು.

ಅಧ್ಯಕ್ಷತೆಯನ್ನು ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಎಸ್ ರಾವ್ ವಹಿಸಿದ್ದರು. ಪಂಚಾಯತ್   ಉಪಾಧ್ಯಕ್ಷ ಸುರೇಶ್ ಕನ್ನೋಟ್ಟು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ನಿವೃತ್ತ ಮುಖ್ಯಶಿಕ್ಷಕ ಆನಂದ ನಾಯ್ಕ ಎನ್ ದಂಪತಿಯನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಶಾಲೆಯಲ್ಲಿ 18 ವರ್ಷಗಳಿಂದ ಅಕ್ಷರ ದಾಸೋಹ ಅಡುಗೆ ಕಾರ್ಯನಿರ್ವಹಿಸುತ್ತಿರುವ ಸರೋಜಿನಿ ಅವರನ್ನು ಗೌರವಿಸಲಾಯಿತು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶಾಲಾ ಹಿರಿಯ ವಿದ್ಯಾರ್ಥಿಗಳಾದ ದೀಪ್ತಿ, ಆಯಿಶತುಲ್ ಸಾಹಿಪ, ಕೆ ಅಸ್ಪಿಯ, ವಿನುತಾ ಅವರನ್ನು ಅಭಿನಂದಿಸಲಾಯಿತು.  ಶಾಲಾ ಮಕ್ಕಳಿಗೆ ಕಲಿಕೆ, ಆಟೋಟ, ಸ್ವಚ್ಛತೆ, ಪೂರ್ಣ ಹಾಜರಾತಿ ಬಗ್ಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

ರಾಜ್ಯಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ದಲ್ಲಿ ಭಾಗವಹಿಸಿದ ಕಾರ್ತಿಕ್ ಕುಮಾರ್ ಅವರನ್ನು ಅಭಿನಂದಿಸಾಲಾಯಿತು. ಶಾಲೆಗೆ ಪ್ರೋತ್ಸಾಹ ನೀಡಿ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಮಹನೀಯರಿಗೆ ಸ್ಮರಣೆ ಕೆ ನೀಡಿ ಗೌರವಿಸಲಾಯಿತು. ಪಂಚಾಯತ್ ಸದಸ್ಯರುಗಳಾದ ಹರಿಶ್ಚಂದ್ರ ಕಾಡಬೆಟ್ಟು, ಜಯ ದೇವಾಡಿಗ, ದೇವಿ ಪ್ರಸಾದ್ ಶೆಟ್ಟಿ, ಗೀತಾ, ಕೆದಿಲ ಕ್ಲಸ್ಟರ್ ಸಿ ಆರ್ ಪಿ ಸುಧಾಕರ್ ಭಟ್, ಕೆಮ್ಮಾನುಪಲ್ಕೆ ನಿವೃತ್ತ ಶಾಲಾ ಮುಖ್ಯ ಶಿಕ್ಷಕರುಗಳಾದ ಆನಂದ ನಾಯ್ಕ್, ಶಿವಪ್ಪ ಪೂಜಾರಿ, ಸುಂದರ್, ಹೇಮಾವತಿ, ಕಡೇಶಿವಾಲಯ ಶಾಲಾ ಮುಖ್ಯ ಶಿಕ್ಷಕ ಬಾಬು ಪೂಜಾರಿ, ನಿವೃತ್ತ ಸೈನಿಕ ಕೆ ಕೆ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಬ್ದುಲ್ ರಝಕ್ ಯಾನೆ ಸಲೀಂ, ಉಪಾಧ್ಯಕ್ಷ ಉಮೇಶ್ ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಉದಯಕುಮಾರ್ ಸ್ವಾಗತಿಸಿ, ಸಹಶಿಕ್ಷಕಿ ವಿದ್ಯಾ ಸರಸ್ವತಿ 2024 25ನೇ ಸಾಲಿನ ಶಾಲಾ ವರದಿ ವಾಚಿಸಿದರು. ಶಿಕ್ಷಕಿ ಸೀಮಾ ಎಚ್ ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕಿ ವಿದ್ಯಾ ಸರಸ್ವತಿ ಬಹುಮಾನಿತರ  ಪಟ್ಟಿ ವಾಚಿಸಿದರು. ಜಿ ಪಿ ಟಿ ಶಿಕ್ಷಕ ಸಚಿನ್ ಎಮ್ ಎಸ್ ವಂದಿಸಿದರು. ಸಹ ಶಿಕ್ಷಕಿ ಸಂಧ್ಯಾ ಬಿ ಕಾರ್ಯಕ್ರಮ ನಿರೂಪಿಸಿದರು.  ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts