ವಿಜಯಪುರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಪ್ರಥಮ ಸ್ಥಾನ ಪಡೆದಿರುತ್ತಾರೆ. ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶಿರಸಿ ಸಂಯೋಜಿಸಿದ ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ – 2024 ಕಾರ್ಯಕ್ರಮದಡಿ ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡರು.
ಜಾಹೀರಾತು
ಇವರನ್ನು ಶ್ರೀ ಸೋಂದಾಸ್ವರ್ಣವಲ್ಲಿ ಮಹಾ ಸಂಸ್ಥಾನ ಶಿರಸಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಪ್ರಾಥಮಿಕ ಶಾಲಾ ವಿಭಾಗದ ‘ಭಗವದ್ಗೀತೆಯಿಂದ ಸಾಮಾಜಿಕ ಸಾಮರಸ್ಯ’ ಎಂಬ ವಿಷಯದಲ್ಲಿ ಭಾಷಣವನ್ನು ಪ್ರಸ್ತುತಪಡಿಸಿದ ಇವರು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿ. ಚಿತ್ರಕಲೆ, ಕಥಾ ರಚನೆಗಳಲ್ಲೂ ರಾಜ್ಯ, ಜಿಲ್ಲೆ , ತಾಲೂಕು ಮಟ್ಟದ ಸಾಕಷ್ಟು ಬಹುಮಾನಗಳನ್ನು ಪಡೆದಿರುತ್ತಾರೆ. ಯಕ್ಷಗಾನ , ಕೊಳಲು ವಾದನ ಇವರ ಹವ್ಯಾಸವಾಗಿದ್ದು ಬಹುಮುಖ ಪ್ರತಿಭೆಯ ವಿದ್ಯಾರ್ಥಿಯಾಗಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಭಾಷಣ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ರಾಜ್ಯಕ್ಕೆ ಪ್ರಥಮ"
Be the first to comment on "ಭಾಷಣ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ರಾಜ್ಯಕ್ಕೆ ಪ್ರಥಮ"