ಪ್ರತೀ ಮಗುವಿವಿನ ಒಳಗೂ ಪ್ರತಿಭೆಗಳು ಸುಪ್ತವಾಗಿರುತ್ತವೆ. ಅವನ್ನು ಗುರುತಿಸಿ ಹೊರತರುವುದು ಹಿರಿಯರ ಜವಾಬ್ದಾರಿ ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ, ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರೂ ಆಗಿರುವ ರಮೇಶ ಎಂ ಬಾಯಾರು ಹೇಳಿದರು.
ಕಲ್ಲಡ್ಕದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದಿಂದ ನಡೆದ ಸಾಹಿತ್ಯ ಸಂಭ್ರಮ 7 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಅಂಬುಜಾಕ್ಷಿ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ.ರಾ.ಮ.ಸಾ.ಪ. ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಕಲಾ ಕಾರಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜತೆ ಕಾರ್ಯದರ್ಶಿ ರಶ್ಮಿತಾ ಸುರೇಶ್ ಜೋಗಿಬೆಟ್ಟು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕಿ ಲಕ್ಷ್ಮಿ ವಂದಿಸಿದರು. ಶಶಿಧರ ಏಮಾಜೆ ಕಾರ್ಯಕ್ರಮ ನಿರ್ವಹಿಸಿದರು. ನಂತರ ಸಂಪನ್ಮೂಲ ವ್ಯಕ್ತಿಗಳಾದ ಸುರೇಖ ಯಳವಾರ ಮತ್ತು ಮಲ್ಲಿಕಾ ಜ್ಯೋತಿಗುಡ್ಡೆ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟರು.