ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡಿನಲ್ಲಿ ಜ.4 ಮತ್ತು 5ರಂದು ನಡೆಯಲಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಮುಳಿಯ ಶಂಕರ ಭಟ್ಟ ಅವರನ್ನು ಡಿ. 17.ರಂದು ಅವರ ಮನೆಯಲ್ಲಿ ಭೇಟಿಯಾಗಿ ಸಮ್ಮೇಳನದ ಆಮಂತ್ರಣ ಪತ್ರವನ್ನು ನೀಡಿ ಗೌರವಪೂರ್ವಕವಾಗಿ ಅಧಿಕೃತವಾಗಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಪರಿಷತ್ತಿನ ಗೌರವ ಪ್ರಧಾನ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕ ರಾಮ ಪ್ರಸಾದ್ ರೈ ತಿರುವಾಜೆ, ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪಾಣೆಮಂಗಳೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಮಹಮ್ಮದ್ ಮತ್ತು ದಿನೇಶ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.