ಪ್ರಮುಖ ಸುದ್ದಿಗಳು

ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ, ಸಂಗೀತ ಸಾಧಕ ವಿದ್ವಾನ್ ಶ್ರೀ ಎಸ್ ಆರ್ ಕೃಷ್ಣಮೂರ್ತಿ ಅವರಿಗೆ ಗೌರವಾರ್ಪಣೆ

ತಮ್ಮ ದಿವ್ಯಾಂಗತೆಯನ್ನು ಮೆಟ್ಟಿ ನಿಂತು, ಕರ್ನಾಟಕ ಸಂಗೀತ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ವಿದ್ವಾನ್ ಎಸ್.ಆರ್.ಕೃಷ್ಣಮೂರ್ತಿ ಅವರ ಸೇವೆಯನ್ನು ಗುರುತಿಸಿ ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕದಿಂದ ಗೌರವಿಸಲಾಯಿತು.

ಜಾಹೀರಾತು

ವಿದ್ವಾನ್ ಶ್ರೀ ಎಸ್ ಆರ್ ಕೃಷ್ಣಮೂರ್ತಿಯವರು ಮೂಲತಃ ತಮಿಳುನಾಡಿನ ಕೊಯಂಬತ್ತೂರ್ ನಿವಾಸಿ, ಹುಟ್ಟಿನಿಂದಲೇ ದಿವ್ಯಾಂಗರು, ಪ್ರಾಯ 79 ವರ್ಷ, ಬಾಲ್ಯದಿಂದಲೇ ಸಂಗೀತದಲ್ಲಿ ಆಸಕ್ತಿಯುಳ್ಳವರಾಗಿದ್ದ ಇವರು ಹತ್ತು ಹಲವು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ವಿಶೇಷ ಹೆಗ್ಗಳಿಕೆ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ರವರು ತಮ್ಮ ಆಡಳಿತದ ಅವಧಿಯಲ್ಲಿ ಇವರನ್ನು ರಾಷ್ಟ್ರಪತಿ ಭವನಕ್ಕೆ ಆಹ್ವಾನಿಸಿ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.ಶ್ರೀ ಎಸ್ ಆರ್ ಕೃಷ್ಣಮೂರ್ತಿಯವರು ತಮ್ಮ ಅಭಿನಯದ ಸಾಮರ್ಥ್ಯವನ್ನು ಪ್ರಸಿದ್ಧ ತಮಿಳು ಚಲನಚಿತ್ರ ನಾನು ಕಡವುಲ್ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ. ಇವರು ಆಕಾಶವಾಣಿಯ ಕರ್ನಾಟಕ ಸಂಗೀತದ ಗ್ರೇಡ್ ಕಲಾವಿದರಾಗಿರುತ್ತಾರೆ. ರಾಷ್ಟ್ರಪತಿ ಅಬ್ದುಲ್ ಕಲಾಂ ರವರು ಕೂಡ ಇವರಿಂದ ಪ್ರಭಾವಿತರಾದವರು ತಮ್ಮೆಲ್ಲ ದಿನಚರಿಯನ್ನು ಯಾರೊಬ್ಬರ ಸಹಾಯವಿಲ್ಲದೆ ನಿರ್ವಹಿಸುವುದರೊಂದಿಗೆ ಅಭೂತಪೂರ್ವ ಚಿತ್ರಕಲಾ ಪ್ರವೀಣರಾಗಿದ್ದಾರೆ. ಅವರ ಜೀವನ ಸಾಧನೆಗಳು, ಮನುಷ್ಯನಿಗೆ ಮನಸ್ಸಿದ್ದರೆ ಏನನ್ನು ಸಾಧಿಸಭಲ್ಲ ಎಂದು ಸಾರಿ ಹೇಳುತ್ತಿದೆ. ಇವರು ಸಮಾಜಕ್ಕೆ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಇಂದು ನಡೆದ ಗೌರವ ಸಮರ್ಪಣಾ ಸಂದರ್ಭದಲ್ಲಿ ಸಕ್ಷಮ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ರಾಜಶೇಖರ್ ಭಟ್ ಕಾಕುಂಜೆ, ಕಾರ್ಯದರ್ಶಿ ಹರೀಶ್ ಪ್ರಭು, ಸಹ ಕಾರ್ಯದರ್ಶಿ ಭಾಸ್ಕರ್ ಹೊಸಮನೆ, ಖಜಾಂಚಿಯವರಾದ ಸತೀಶ್ ರಾವ್ , ಮತ್ತು ಸದಸ್ಯರಾದ ಶ್ಯಾಮಲ ಭಟ್ ಕಾಕುಂಜೆ, ಗೀತಾ ಲಕ್ಷ್ಮೀಶ್, ಅನುಷಾ ಭಟ್ ಕಾಕುಂಜೆ ಉಪಸ್ಥಿತರಿದ್ದರು

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts