ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಹೈಸ್ಕೂಲಿನಲ್ಲಿ ಮಿನಿ ವಿಜ್ಞಾನ ಕೇಂದ್ರ ಉದ್ಘಾಟನೆ

KRISHNARAJA SHETTY

ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ-ಪ್ರತಿಭಾ ಪುರಸ್ಕಾರ ಸಮಾರಂಭದ ಸಂದರ್ಭ, ಮಿನಿ ವಿಜ್ಞಾನ ಕೇಂದ್ರವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಪತ್ರಕರ್ತ ವಾಲ್ಟರ್ ನಂದಳಿಕೆ ಅವರು ಧ್ವಜಾರೋಹಣ ನೆರವೇರಿಸಿ, ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಸ್ತಾವನೆಗೈದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ,  ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್‌ಕುಮಾರ್, ಬಂಟ್ವಾಳ ತಾಲೂಕು ಪಂಚಾಯಿತಿ.ಕಾರ್ಯನಿರ್ವಹಣಾಧಿಕಾರಿ ಸಚಿನ್‌ ಕುಮಾರ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ಬೂಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಶಾಲಾ ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧೀರ್, ಶಾಲಾ ವಿದ್ಯಾರ್ಥಿ ನಾಯಕ ಕೌಶಿಕ್ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರ್ವಹಿಸಿದರು.ಹಿರಿಯ ಶಿಕ್ಷಣ ತಜ್ಞ ನಾಟಿ ಕೃಷ್ಣರಾಜ ಶೆಟ್ಟಿ  ಮಿನಿ ವಿಜ್ಞಾನ ಕೇಂದ್ರಕ್ಕೆ ಸಿಎಸ್‌ಆರ್ ಅನುದಾನ ನೀಡಿದ ಶಂಭೂರು ಎಎಂಆರ್-ಗ್ರೀನ್‌ಕೊ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಅವರನ್ನು ಸನ್ಮಾನಿಸಲಾಯಿತು..

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಹೈಸ್ಕೂಲಿನಲ್ಲಿ ಮಿನಿ ವಿಜ್ಞಾನ ಕೇಂದ್ರ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*