ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ-ಪ್ರತಿಭಾ ಪುರಸ್ಕಾರ ಸಮಾರಂಭದ ಸಂದರ್ಭ, ಮಿನಿ ವಿಜ್ಞಾನ ಕೇಂದ್ರವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಪತ್ರಕರ್ತ ವಾಲ್ಟರ್ ನಂದಳಿಕೆ ಅವರು ಧ್ವಜಾರೋಹಣ ನೆರವೇರಿಸಿ, ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಸ್ತಾವನೆಗೈದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್‌ಕುಮಾರ್, ಬಂಟ್ವಾಳ ತಾಲೂಕು ಪಂಚಾಯಿತಿ.ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ, ಬೂಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಶಾಲಾ ಮುಖ್ಯಶಿಕ್ಷಕ ಕಮಲಾಕ್ಷ ಕಲ್ಲಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧೀರ್, ಶಾಲಾ ವಿದ್ಯಾರ್ಥಿ ನಾಯಕ ಕೌಶಿಕ್ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ಕಾರ್ಯಕ್ರಮ ನಿರ್ವಹಿಸಿದರು.ಹಿರಿಯ ಶಿಕ್ಷಣ ತಜ್ಞ ನಾಟಿ ಕೃಷ್ಣರಾಜ ಶೆಟ್ಟಿ ಮಿನಿ ವಿಜ್ಞಾನ ಕೇಂದ್ರಕ್ಕೆ ಸಿಎಸ್‌ಆರ್ ಅನುದಾನ ನೀಡಿದ ಶಂಭೂರು ಎಎಂಆರ್-ಗ್ರೀನ್‌ಕೊ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಅವರನ್ನು ಸನ್ಮಾನಿಸಲಾಯಿತು..