ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಕುರಿತು ಆಡಿತ ಮಾತು ಅಕ್ಷಮ್ಯವಾಗಿದ್ದು, ಅವರ ಮೇಲೆ ಬಿಜೆಪಿ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಕ್ಷಮೆ ಯಾಚಿಸಬೇಕು ಎಂದ ದಿನೇಶ್ ಗುಂಡೂರಾವ್, ಬಿಜೆಪಿ ಸಿದ್ಧಾಂತ ತತ್ವವನ್ನು ಅಮಿತ್ ಶಾ ಮಾತು ಎತ್ತಿ ತೋರಿಸುತ್ತದೆ ಎಂದರು,
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಮಿತ್ ಶಾ ಹಾಗೂ ಸಿ.ಟಿ.ರವಿ ಹೇಳಿಕೆಗಳನ್ನು ಖಂಡಿಸಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಪಕ್ಷ ಪ್ರಮುಖರಾದ ಪಿಯೂಸ್ ಎಲ್. ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಅಬ್ಬಾಸ್ ಆಲಿ ಬೋಳಂತೂರು, ಜೆಸಿಂತಾ ಡಿಸೋಜ, ಐಡಾ ಸುರೇಶ್, ಮಲ್ಲಿಕಾ ಶೆಟ್ಟಿ, ವೆಂಕಪ್ಪ ಪೂಜಾರಿ, ಮಹಮ್ಮದ್ ನಂದಾವರ, ಯೂಸುಫ್ ಕರಂದಾಡಿ, ಪದ್ಮನಾಭ ರೈ, ಚಿತ್ತರಂಜನ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.