ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬೊಂಡಾಲದಲ್ಲಿ ನಿರ್ಮಾಣಗೊಂಡ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಽಕಾರಿ ಬಿಂದಿಯಾ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಜಿಲ್ಲಾ ಆರೋಗ್ಯಾಽಕಾರಿ ಡಾ. ಎಚ್.ಆರ್.ತಿಮ್ಮಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್‌ಕುಮಾರ್ ರೈ, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಜಿಲ್ಲಾ ನಿರ್ಮಿತಿ ಕೇಂದ್ರ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment on "ಬೊಂಡಾಲ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಉದ್ಘಾಟನೆ"