ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಘನವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನ ಶನಿವಾರ ಬೆಳಿಗ್ಗೆ ನಡೆದಿದೆ.
ಟಾಟಾ ಕಂಪೆನಿಯ ಏಸ್ ಗೂಡ್ಸ್ ಟೆಂಪೋವೊಂದು ಚಾಲಕನ ನಿರ್ಲಕ್ಷ್ಯತನದಿಂದ ಸೇತುವೆಯಲ್ಲಿ ಸಿಲುಕಿಕೊಂಡ ಘಟನೆ ನಡೆಯಿತು. ಬಿಸಿರೋಡಿನಿಂದ ಗೂಡಿನಬಳಿಯಾಗಿ ಪಾಣೆಮಂಗಳೂರು ಕಡೆಗೆ ಸಂಚಾರಕ್ಕೆ ಯತ್ನಿಸಿದ ಸಂದರ್ಭ, ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ಹಾಕಲಾದ ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡಿದೆ. ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಅಪಾಯವಿಲ್ಲದೆ ಪಾರಾಗಿದ್ದು, ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…