ಕರಾವಳಿ ಉತ್ಸವ ಪ್ರಯುಕ್ತ ಸಾರ್ವಜನಿಕರ ಆಕರ್ಷಣೆಗೆಂದು ಆರಂಭಗೊಂಡಿದ್ದ ಹೆಲಿಕಾಪ್ಟರ್ ಸಂಚಾರದ ನಿಲ್ದಾಣವೀಗ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರವಾಗಿದೆ. ಶನಿವಾರ ಬೆಳಗ್ಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ಮಹಾಲಿಂಗ ನಾಯ್ಕ ಅಮೈ ಉದ್ಘಾಟನಾ ಉಡ್ಡಯನ ಮಾಡಿದ್ದರು.
ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ನಡೆಯುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ವೀಕ್ಷಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಪ್ರತಿ ವ್ಯಕ್ತಿಗೆ ರೂ. 4,500 ದರ ನಿಗದಿಪಡಿಸಲಾಗಿದೆ. ಹೆಲಿಕಾಫ್ಟರ್‍ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com (ಮೊಬೈಲ್ ಸಂಖ್ಯೆ:- 9400399999 / 7483432752) ಸಂಪರ್ಕಿಸಬಹುದಾಗಿದೆ.