ಪುತ್ತೂರಿನ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಡಿ.29ರಂದು ಸಂಜೆ 4ರಿಂದ ನೃತ್ಯಧಾರಾ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಪತ್ರಕರ್ತ ವಾಲ್ಟರ್ ನಂದಳಿಕೆ, ಉದ್ಯಮಿ ಅವಿನಾಶ್ ಕಾಮತ್ ಭಾಗವಹಿಸುವರು. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರಿಗೆ ಮರಣೋತ್ತರವಾಗಿ ಕಲಾನಯನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಧ್ವನಿ ಮತ್ತು ಬೆಳಕು ಸಂಯೋಜಕರಾದ ಮೋಹನ್ ದಂಪತಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ನೃತ್ಯ ನಿರ್ದೇಶಕಿ ರೋಹಿಣಿ ಉದಯ್ ಮತ್ತು ಸಂಚಾಲಕ ಉದಯ ವೆಂಕಟೇಶ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.