ಬಂಟ್ವಾಳ

ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ – News with Photos

ಜಾಹೀರಾತು

ಲೋರೆಟ್ಟೊ ಮಾತಾ ಚರ್ಚ್ ನಲ್ಲಿ ಕ್ರಿಸ್ಮಸ್ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಾಯಂಕಾಲ ನೂರಾರು ಭಕ್ತರು ಯೇಸು ಕ್ರಿಸ್ತರ ಜನನವನ್ನು ಬಲಿಪುಜೆಯೊಂದಿಗೆ ಆಚರಿಸಿದರು.

ಪ್ರಧಾನ ಧರ್ಮಗುರುಗಳಾಗಿ ಧರ್ಮಗುರುಗಳಾದ ವಂ.ಫ್ರಾನ್ಸಿಸ್ ಕ್ರಾಸ್ತಾ ಲೊರೆಟ್ಟೊ ಅಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ವಂ.ಜೇಸನ್ ಮೋನಿಸ್ ಲೋಕೊದ್ಧಾರಕ್ಕಾಗಿ ಧರೆಗೆ ಇಳಿದು ಬಂದ ಯೇಸು ಕ್ರಿಸ್ತರ ಜನನದ ಪ್ರಾಮುಖ್ಯತೆಯನ್ನು ಪ್ರವಚನ ಮೂಲಕ ತಿಳಿಸಿದರು..

ಕ್ರಿಸ್ಮಸ್ ಪ್ರಯುಕ್ತ ಧರ್ಮಗುರುಗಳು ತಮ್ಮ ಸಂದೇಶದಲ್ಲಿ , ಪಾಪದಲ್ಲಿ ಮುಳುಗಿ ಹೋದ ಮನುಜ ಕುಲವನ್ನು ಪ್ರೀತಿಯಿಂದ ಅಪ್ಪಿಕೊಳ್ಳಲು ನಿಮ್ಮ ದೈನಂದಿನ ಜೀವನದಲ್ಲಿ ದೇವರು ರೂಪಿಸಿದ ಯೋಜನೆಯ ದೇವರ ಕುವರ ಏಸುಕ್ರಿಸ್ತರ ಜನನ ಈ ಹಬ್ಬವು ದೇವರ ಅಗಾಧ ಪ್ರೀತಿಯನ್ನು ಮನುಜ ಕುಲಕ್ಕೆ ತೋರಿಸುತ್ತದೆ ಪ್ರೀತಿಸುವ ಹೃದಯಗಳಲ್ಲಿ ಪ್ರೀತಿ ಪಾತ್ರ ಯೇಸುವಿನ ಜನನವಾಗುತ್ತದೆ ಎಂದು ತಮ್ಮ ಸಂದೇಶ ನೀಡಿದರು

ಚರ್ಚ್ ಅವರಣದಲ್ಲಿ ಎಲ್ಇಡಿ ಪರದೆಯನ್ನು ಅಳವಡಿಸಲಾಗಿತ್ತು. ಸಂಬ್ರಮಕ್ಕೆ ಸಹಕರಿಸಿದ ಧಾನಿಗಳಿಗೆ ಗೌರವಪೂರ್ವಕ ವಾಗಿ ಅಲಂಕರಿಸಿದ ಮೇಣದ ಬತ್ತಿಗಳನ್ನು ವಿತರಿಸಲಾಯಿತು.

ಚರ್ಚ್ ನ್ನು ರಂಗು ರಂಗಿನ ವಿದ್ಯುದೀಪಾಲಂಕಾರದಿಂದ ಕಂಗೊಳಿಸಲಾಗಿತ್ತು. ಬಲಿಪೂಜೆಯ ಬಳಿಕ ಐಸಿವೈಎಮ್ ಸದಸ್ಯರು ಮನರಂಜನ ಕಾರ್ಯಕ್ರಮ ನೀಡಿದರು. ಏಸುಕ್ರಿಸ್ತರ ಜನ್ಮ ದಿನವನ್ನು ಸಾರುವ ಗೋದಲಿಯನ್ನು ಐಸಿವೈಮ್ ಸದಸ್ಯರು ನಿರ್ಮಿಸಿದರು. ಚರ್ಚ್ ಪಾಲನಾ ಮಂಡಳಿ ನೇತೃತ್ವದಲ್ಲಿ ಶಿಸ್ತುಬದ್ಧವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಧರ್ಮಗುರುಗಳು ಸಹಕರಿಸಿದ ಸರ್ವರರನ್ನು ವಂದಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts