ಮೊಗರ್ನಾಡು ದೇವಮಾತಾ ಚರ್ಚ್: 250ನೇ ವರ್ಷಾಚರಣೆಗೆ ಚಾಲನೆ

ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭ ಅದ್ದೂರಿಯ ಚಾಲನೆ ನೀಡಲಾಯಿತು.

ಜಾಹೀರಾತು

ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ನ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಚಾಲನೆ ನೀಡಿದರು.

ಚರ್ಚ್ ವ್ಯಾಪ್ತಿಯ ಭಕ್ತರು ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸುವ ಜತೆಗೆ ಏಕತೆ, ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ 250 ಕ್ಯಾಂಡಲ್‌ಗಳನ್ನು ಅದೇ ಸಂಖ್ಯೆಯ ಆಕಾರದಲ್ಲಿ ಜೋಡಿಸಿ ಬೆಳಗಿಸಿ ಸಂಭ್ರಮಿಸಿದರು.

ಚರ್ಚ್ನ ಪ್ರಧಾನ ಧರ್ಮಗುರು ರೆ| ಫಾ| ಅನಿಲ್ ಕೆನ್ಯುಟ್ ಡಿಮೆಲ್ಲೊ ಅವರು ವರ್ಷವಿಡೀ ನಡೆಯುವ 250ನೇ ವರ್ಷಾಚರಣೆ ಕಾರ್ಯಕ್ರಮದ ಪಟ್ಟಿಯನ್ನು ಅನಾವರಣಗೊಳಿಸಿದರು. ಆವರಣೆ ಹಾಗೂ ಕೃತಜ್ಞತೆಯಾಗಿ ವರ್ಷಾಚರಣೆಯ ಥೀಮ್ ಹಾಡನ್ನು ಪ್ರಸ್ತುತ ಪಡಿಸಲಾಯಿತು.

ಐತಿಹಾಸಿಕ ವರ್ಷಾಚರಣೆಯಲ್ಲಿ ಆಧ್ಯಾತ್ಮಿಕತೆ, ಸಮುದಾಯ ಸಂಘಟನೆ, ಸಾಂಸ್ಕೃತಿಕ ವೈಭವ ಸೇರಿದಂತೆ ಚರ್ಚಿನ ಗೌರವಯುತ ಪರಂಪರೆಯನ್ನು ಮುಂದುವರಿಸುವ ದೃಷ್ಟಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ನಡೆಸುವ ಕುರಿತು ಈ ಸಂದರ್ಭದಲ್ಲಿ ವಿವರಿಸಲಾಯಿತು. ಸಂಭ್ರಮಾಚರಣೆಯಲ್ಲಿ ಸರ್ವರೂ ಪಾಲ್ಗೊಂಡು ಮುಂಬರುವ ಪ್ರತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಸಹಕರಿಸಲು ವಿನಂತಿಸಲಾಯಿತು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ರೆಡ್ ಲೋಬೊ, ಸರ್ವ ಆಯೋಗಗಳ ಸಂಚಾಲಕಿ ಎಮಿಲಿಯಾ ಡಿಕುನ್ಹಾ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮೊಗರ್ನಾಡು ದೇವಮಾತಾ ಚರ್ಚ್: 250ನೇ ವರ್ಷಾಚರಣೆಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*