ಪುತ್ತೂರಿನ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ವತಿಯಿಂದ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನೃತ್ಯಧಾರಾ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ ಜೊತೆಗೆ ಸಂಜೆ ಸಭಾ ಕಾರ್ಯಕ್ರಮ ನಡೆಯಿತು, ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ನಾಲ್ಕು ಪ್ರಕಾರದ ಕಲೆಗಳು ಬೆಳೆಯುತ್ತಿವೆ. ಕಲೆ, ಸಂಸ್ಕೃತಿ ನಿರಂತರವಾಗಿ ಬೆಳೆಯಬೇಕು. ಮಗುವನ್ನು ಉತ್ತಮ ಕಲಾವಿದರನ್ನಾಗಿಸಿದರೆ, ಉತ್ತಮ ಪ್ರಜೆಯಾಗಬಹುದು. ನೃತ್ಯದಲ್ಲಿ ಮನಸ್ಸು ಉದ್ರೇಕಗೊಳಿಸುವ ಹಾಡುಗಳಿಲ್ಲ. ನೃತ್ಯದೊಂದಿಗೆ ದೇವಸ್ಥಾನಕ್ಕೆ ಕಳುಹಿಸುವ ಕೆಲಸ ಮಾಡಬೇಕು ಎಂದು ಪೋಷಕರಿಗೆ ಅವರು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಯಾಗಿ ದೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ ನಾವು ಸಂಗೀತ, ನೃತ್ಯಕ್ಕೆ ಬೆನ್ನೆಲುಬಾಗಿರುವುದು ಮುಖ್ಯವಾಗಿದೆ. ಮಕ್ಕಳಲ್ಲಿ ಯಾವುದು ಆಸಕ್ತಿ ಇದೆ, ಅದಕ್ಕೆ ಪ್ರೋತ್ಸಾಹ ನೀಡಿ ಭವಿಷ್ಯದಲ್ಲಿ ಉತ್ತಮ ಸಾಧಕರನ್ನಾಗಿಸಬೇಕು. ನಯನ ಕುಮಾರ್ ಅವರಂಥ ಹಿರಿಯ ಕಲಾವಿದರನ್ನು ನೆನಪಿಸಿಕೊಳ್ಳುವುದು ಉತ್ತಮ ವಿಷಯವಾಗಿದೆ ಎಂದರು.
ಉದ್ಯಮಿ ಅವಿನಾಶ್ ಕಾಮತ್ ಮಾತನಾಡಿ ಶುಭ ಹಾರೈಸಿದರು. ಇದೇ ವೇಳೆ. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರಿಗೆ ಮರಣೋತ್ತರವಾಗಿ ಕಲಾನಯನ ಪ್ರಶಸ್ತಿ ಹಿನ್ನೆಲೆಯಲ್ಲಿ ಅವರ ಸ್ಮರಣೆ ಮಾಡಲಾಯಿತು. ಧ್ವನಿ ಮತ್ತು ಬೆಳಕು ಸಂಯೋಜಕರಾದ ಮೋಹನ್ ದಂಪತಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ನೃತ್ಯ ನಿರ್ದೇಶಕಿ ರೋಹಿಣಿ ಉದಯ್ ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು. ಸಂಚಾಲಕ ಉದಯ ವೆಂಕಟೇಶ ಭಟ್ ಸ್ವಾಗತಿಸಿದರು. ವಿಖ್ಯಾತ್ ಕಾರ್ಯಕ್ರಮ ನಿರ್ವಹಿಸಿದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)