ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಗುರುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ನಲ್ಲಿ ಇರುವ ಸಿಎನ್.ಜಿ. ಘಟಕಕ್ಕೆ ಬೇಟಿ ನೀಡಿದರು.
ಈ ಸಂದರ್ಭ ಘಟಕದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದ ಅವರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಇಂತಹ ಪ್ರಯತ್ನಗಳು ಸಹಕಾರಿ ಆಗುತ್ತದೆ ಎಂದು ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕ ರಾಜೇಶ್ ನಾಯ್ಕ್ ಹಾಗೂ ಅವರ ಪುತ್ರ ಉನ್ನತ್ ಆರ್.ನಾಯ್ಕ್ ಘಟಕದಲ್ಲಿ ಅಟೋ ಗ್ಯಾಸ್ ಪ್ರಾಯೋಗಿಕ ವಿತರಣೆಗೆ ಅನುಕೂಲ ಕಲ್ಪಿಸಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಕ್ಷಿಣ ಕನ್ನಡ .ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ಮಂಗಳೂರು ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ಸಂಜಯ್ ಪ್ರಭು, ಬಿ. ದೇವದಾಸ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯತೀಶ್ ಅರ್ವಾರ್, ಸಚಿನ್ ಅಡಪ, ಪವನ್ ಕುಮಾರ್, ರವೀಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…