ತುಂಬೆ ಡ್ಯಾಮ್ ನಲ್ಲಿ ಜಲಮಟ್ಟ ಕಾಯ್ದುಕೊಳ್ಳುವಂತೆ ಶಾಸಕರಿಗೆ ಹಾಗೂ ತಹಸೀಲ್ದಾರ್ ಅವರಿಗೆ ಸಜೀಪದ ರೈತರು ಲಿಖಿತ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಕುಡಿಯುವ ನೀರು ಸರಬರಾಜು ಗಾಗಿ ನೇತ್ರಾವತಿ ನದಿಗೆ ತುಂಬೆಯಲ್ಲಿ ನಿರ್ಮಿಸಲಾದ ಡ್ಯಾಮ್ ನಲ್ಲಿ ಆರು ಮೀಟರ್ ನೀರು ಸಂಗ್ರಹಿಸುವುದಾಗಿ ಮುಳುಗಡೆ ಪ್ರದೇಶಕ್ಕೆ ಪರಿಹಾರ ನೀಡಿ ಇದೀಗ ಯಾವುದೇ ಪೂರ್ವ ಸೂಚನೆ ನೀಡದೆ 6:30 ಮೀಟರ್ ಗೂ ಅಧಿಕ ನೀರು ಸಂಗ್ರಹಿಸಿದ್ದು ರೈತರು ಆತಂಕಕ್ಕೆ ಒಳಗಾಗಿದ್ದಾರೆ. ರೈತರು ಬೆಳೆಸಿದ ಬೆಳೆ ನೀರುಪಾಲಾಗುತ್ತಿದೆ ಎಂದು ತುಂಬೆ ಜಲಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ.