ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘ ಹಾಗೂ ಶ್ರೀದೇವಿ ಗೆಳೆಯರ ಬಳಗ ಆಶ್ರಯದಲ್ಲಿ 2024 -25ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಅಕ್ಷರ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.
ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ ಆಗಮಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ ಡಿ. ಪೂಜಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಗತಿಗೆ ಸೇವೆ ಸಲ್ಲಿಸಿದ 7 ನಿಕಟ ಪೂರ್ವ ಅಧ್ಯಕ್ಷರುಗಳನ್ನು ಶಾಲಾ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.
ಶಾಲಾ ವತಿಯಿಂದ ವರ್ಷದಿಂದ ಪ್ರಾರಂಭಿಸಲಾದ ಅಕ್ಷರರತ್ನ ಪ್ರಶಸ್ತಿಯನ್ನು ಸರಕಾರಿ ಶಾಲೆಗಳ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಚಿನ್ನಾ ಕಲ್ಲಡ್ಕ ಅವರಿಗೆ ನೀಡಿ ಗೌರವಿಸಲಾಯಿತು.
ಗ್ರಾಮೀಣ ಪ್ರದೇಶದ ಪುಟ್ಟ ಶಾಲೆಯ ಪ್ರತಿಭಾ ಪುರಸ್ಕಾರಕ್ಕೆ ಪ್ರಪ್ರಥಮವಾಗಿ ಭೇಟಿ ಕೊಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಶಾಲೆ ಹಾಗೂ ಊರವರ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.
ಮುಖ್ಯ ಶಿಕ್ಷಕಿ ಡಾ.ತ್ರಿವೇಣಿ ರಮೇಶ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ಶೆಟ್ಟಿ ರವರನ್ನು ಗೌರವಿಸಲಾಯಿತು. ಶಾಲೆಯ ಅಭಿವೃದ್ಧಿಯಲ್ಲಿ ವಿಶೇಷವಾಗಿ ಸಹಕರಿಸುತ್ತಿರುವ ಸಂಘ ಸಂಸ್ಥೆ ಹಾಗೂ ಮಹನೀಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪ್ರತಿಭಾ ಪುರಸ್ಕಾರದ ನಿಮಿತ್ತ ಶಾಲಾ ಮಕ್ಕಳಿಗೆ ಕಲಿಕೆ- ಆಟೋಟ , ವಿಶೇಷ ಸಾಧನೆಗೈದ ಕರಾಟೆ ಪಟು ಹಾಗೂ ಪ್ರತಿಭಾ ಕಾರಂಜಿ ಸ್ಪರ್ಧಾ ವಿಜೇತರಿಗೆ , ಅತ್ಯುತ್ತಮ ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸನ್ಮಾನ,ಹಳೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಗಣೇಶ್ ಆಚಾರ್ಯ , ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ, ನೆಟ್ಲ ಮುಡ್ನೂರು ಪಂಚಾಯತ್ ಉಪಾಧ್ಯಕ್ಷರಾದ ಸಚ್ಚಿದಾನಂದ,ಸದಸ್ಯರುಗಳಾದ ಧನಂಜಯ ಗೌಡ, ಶಕೀಲಾ ಕೃಷ್ಣ ಮಿತ್ತಕೋಡಿ, ಪ್ರಧಾನ ಅಭ್ಯಾಗತರಾದ ಸಹ ಶಿಕ್ಷಕ ವೆಂಕಟೇಶ್ ಅನಂತಾಡಿ, ನಿವೃತ್ತ ಪ್ರಾಂಶುಪಾಲ ಜಯರಾಮ್ ರೈ, ಮಾಣಿ ಕ್ಲಸ್ಟರ್ ಸಿ. ಆರ್. ಪಿ ಸತೀಶ್ ರಾವ್, ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಡಾ. ತ್ರಿವೇಣಿ ರಮೇಶ್ ಸ್ವಾಗತಿಸಿ, ಸಹ ಶಿಕ್ಷಕ ಉದಯ ಚಂದ್ರ ಕೆ. ಎಸ್ ಶಾಲಾ ವರದಿ ವಾಚಿಸಿ, ಶಿಕ್ಷಕಿ ದೀಕ್ಷಾ ಬಹುಮಾನಿತರ ಪಟ್ಟಿ ವಾಚಿಸಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ಶೆಟ್ಟಿ ವಂದಿಸಿ, ಅತಿಥಿ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಯಶ್ವಿತ ಸಹಕರಿಸಿದರು.
ಸಭಾ ಕಾರ್ಯಕ್ರಮದ ಮೊದಲು ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಪ್ರಗತಿ ನಿರ್ದೇಶನದಲ್ಲಿ ಶಾಲಾ ಮಕ್ಕಳಿಂದ ಪ್ರದರ್ಶಿಸಲ್ಪಟ್ಟ “ನವಶಕ್ತಿ ವೈಭವ “ನೃತ್ಯ ಪ್ರೇಕ್ಷಕರ ಗಮನಸೆಳೆಯಿತು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…