ಜಿಲ್ಲಾ ಸುದ್ದಿ

ವಸತಿ ಶಾಲೆಗಳ ಪ್ರವೇಶ: ಅರ್ಜಿ ಆಹ್ವಾನ – DETAILS

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಡಾ. ಬಿ.ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ ನಾರಾಯಣ ಗುರು 2025-26ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ಮಂಗಳೂರಿನ ನೆಲ್ಲಿತೀರ್ಥ, ಗುರುಪುರ ಮುಲ್ಕಿಯ ಕಮ್ಮಾಜೆ, ಮೂಡಬಿದ್ರೆಯ ಕಲ್ಲಬೆಟ್ಟು, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳದ ವಗ್ಗ, ಪುಂಜಾಲಕಟ್ಟೆ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಶಾಲೆಗಳಿಗೆ   ಅರ್ಜಿ ಆಹ್ವಾನಿಸಲಾಗಿದೆ.

ಜಾಹೀರಾತು

ದ.ಕ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು  ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾವiಗ್ರಿಗಳನ್ನು ನೀಡಲಾಗುತ್ತದೆ.   2025ರ ಫೆಬ್ರವರಿ 15 ರಂದು ಮಧ್ಯಾಹ್ನ 2:30 ರಿಂದ 4:30ರವರೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಯು ತನ್ನ ಎಸ್‍ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಆನ್‍ಲೈನ್ ಮೂಲಕ ಜನವರಿ 25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವಸತಿ ಶಾಲಾ ಪ್ರಾಂಶುಪಾಲರ ದೂ.ಸಂ: 0824-2451237 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts