ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್, ವಿಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಪಲಿಮಾರು ಶ್ರೀ ಜನಾರ್ದನ ಪೈ ಸಭಾಂಗಣದ ರವಿವರ್ಮ ಕೃಷ್ಣರಾಜ ಅರಸು ವೇದಿಕೆಯಲ್ಲಿ ತಾಲೂಕು ಆರನೇ ಚುಟುಕು ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಸಂಪನ್ನಗೊಂಡಿತು.
ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ, ಮುಳಿಯ ಶಂಕರಭಟ್ ಅಧ್ಯಕ್ಷೀಯ ಭಾಷಣ ಮಾಡಿ, ಚುಟುಕುಗಳು ಅಣಕು ವಿನೋದವಾಗಿರಬೇಕೇ ಹೊರತು ವ್ಯಕ್ತಿಗತ ಮಾನಸಿಕ ವೇದನೆಗೆ ಕಾರಣವಾಗಿರಬಾರದು. ಗಟ್ಟಿತನದ ಚುಟುಕು ಸಾರ್ವಕಾಲಿಕವಾಗಿ ಉಳಿಯುತ್ತದೆ. ಮಕ್ಕಳ ಮನಸ್ಸನ್ನು ಚುಟುಕು ಒಪ್ಪುತ್ತವೆ, ಗೆಲ್ಲುತ್ತವೆ. ಕಾಲಕಾಲದ ಪರಿಸ್ಥಿತಿಗಳಿಗೆ ಅನುಗುಣವಾಗಿ ಚುಟುಕುಗಳ ಸ್ವರೂಪಗಳೂ ರೂಪಾಂತರಗೊಂಡಿವೆ. ಚುಟುಕುಗಳು ಜಗದೊಡಲೊಳಗೆ ನಿರಂತರ ಸಂಪರ್ಕದಲ್ಲಿರುತ್ತವೆ ಎಂದು ಚುಟುಕು ಸಾಹಿತ್ಯದ ಮಹತ್ವವನ್ನು ತಿಳಿಸಿದರು.
ವಿಟ್ಲ ಅರಮನೆಯ ಬಂಗಾರು ಅರಸರ ಉಪಸ್ಥಿತಿಯಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರೀಯ ಸಮಿತಿಯ ಪ್ರಧಾನ ಸಂಚಾಲಕ ಎಂ. ಜಿ. ಆರ್. ಅರಸು ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ, ಇರಾ ನೇಮು ಪೂಜಾರಿ, ಮೈಸೂರು ಜಿಲ್ಲೆ ಚುಟುಕು ಸಾಹಿತ್ಯ ಪರಿಷತ್ ಉಪಾಧ್ಯಕ್ಷ ನಟರಾಜ್ ಮೈಸೂರು, ವಿದ್ಯಾ ಸಂಸ್ಥೆಯ ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಸಮ್ಮೇಳನ ಸ್ವಾಗತ ಸಮಿತಿ ಉಪಾಧ್ಯಕ್ಷ ಸುದರ್ಶನ ಪಡಿಯಾರ್ ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ಸೀತಾಲಕ್ಷ್ಮಿ ವರ್ಮ ಅವರ ಬೊಗಸೆಯೊಳಗಿನ ‘ಚುಟುಕು ಸಾಗರ’ ಕೃತಿ ಅನಾವರಣಗೊಂಡಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಆರಾಧನಾ ಕಲಾಭವನ ಸಾರಡ್ಕ(ಸಂಸ್ಥೆ), ದೈಹಿಕ ಶಿಕ್ಷಕ ನಿರ್ದೇಶಕ ಶ್ರೀನಿವಾಸ್ ಗೌಡ, ಉಪನ್ಯಾಸಕ ಅಣ್ಣಪ್ಪ ಸಾಸ್ತಾನ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶೇಖರ ಪರವ, ಗೋಪಾಲ ಜೋಗಿ, ನಾಟಿ ವೈದ್ಯರಾದ ನಳಿನಿ, ಬಾಲ ಪ್ರತಿಭೆ ರಿಷಿತ್ ರಾಜ್ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಕನ್ನಡ ಧ್ವಜಾರೋಹಣಗೈದರು. ಚುಟುಕು ಸಾಹಿತ್ಯ ಧ್ವಜಾರೋಹಣವನ್ನು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ನೆರವೇರಿಸಿದರು. ವಿಠಲ ಎಜುಕೇಶನ್ ಸೊಸೈಟಿ ಸದಸ್ಯ ನಿತ್ಯಾನಂದ ನಾಯಕ್ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿದರು.
ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ ಸ್ವಾಗತಿಸಿದರು. ಚುಟುಕು ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ಆನಂದ ರೈ ಅಡ್ಕಸ್ಥಳ ಪ್ರಸ್ತಾವಿಸಿದರು. ಸ್ವಾಗತ ಸಮಿತಿಯ ಕೋಶಾಧಿಕಾರಿ ಮೋಹನ ಗುರ್ಜಿನಡ್ಕ ವಂದಿಸಿದರು. ರಾಧಾಕೃಷ್ಣ ಎರುಂಬು, ಮಲ್ಲಿಕಾ ಶೆಟ್ಟಿ ಸಿದ್ಧಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಸಮ್ಮೇಳನದ ಅಂಗವಾಗಿ ವಿರಾಜ್ ಅಡೂರು ರಚಿಸಿದ ವ್ಯಂಗ್ಯ ಚಿತ್ರ ಪ್ರದರ್ಶನ, ಬಾಲಕೃಷ್ಣ ಶೆಟ್ಟಿ ಖಂಡಿಗ ಹಾಗೂ ವಿದ್ಯಾರ್ಥಿಗಳು ರಚಿಸಿದ ಚಿತ್ರಕಲಾ ಪ್ರದರ್ಶನ ನಡೆಯಿತು. ಸಮ್ಮೇಳನದಲ್ಲಿ ಸಮಾರೋಪ ಭಾಷಣವನ್ನುಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯ ಕಾನೂನು ಅಧಿಕಾರಿ, ಸಾಹಿತಿ, ನರಸಿಂಹ ವರ್ಮ ವಿಟ್ಲ ಅರಮನೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ರೈ, ಬಂಟ್ವಾಳ ಹಿದಯ ಫೌಂಡೇಶನ್ ಅಧ್ಯಕ್ಷ ಹಾಜಿ ಮಹಮ್ಮದ್ ಹನೀಫ್ ಗೋಳ್ತಮಜಲು ಭಾಗವಹಿಸಿದ್ದರು. ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಸಂಚಾಲಕ ಡಾ.ಎಂ.ಜಿ.ಅರಸ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಆನಂದ ರೈ ಅಡ್ಕಸ್ಥಳ, ಸ್ವಾಗತ ಸಮಿತಿ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ, ಉಪಾಧ್ಯಕ್ಷ ಸುದರ್ಶನ ಪಡಿಯಾರ್ ವಿಟ್ಲ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದ ಡಾ.ವಿಶ್ವನಾಥ ನಾಯಕ್, ಡಾ.ಜಯರಾಮ ವಿಶ್ವನಾಥ, ಸಾಹಿತ್ಯ ಕ್ಷೇತ್ರದ ಸವಿತಾ ಎಸ್.ಭಟ್ ಅಡ್ವಾಯಿ, ಶಿಕ್ಷಣ ಕ್ಷೇತ್ರದ ನಾರಾಯಣ ಪೂಜಾರಿ ಎಸ್.ಕೆ, ಯಕ್ಷಗಾನ ರಂಗದ ಸದಾಶಿವ ಶೆಟ್ಟಿ ಸಿದ್ಧಕಟ್ಟೆ, ಕೃಷಿ ಕ್ಷೇತ್ರದ ಚಿದಾನಂದ ಪೆಲತ್ತಿಂಜ, ವಾಸ್ತು ತಜ್ಞ ಕೃಷ್ಣಪ್ಪ ಆಚಾರ್ಯ, ದೈವ ನರ್ತಕ ರಮೇಶ್ ವಗ್ಗ, ಸಾಮಾಜಿಕ ಸೇವಾಕರ್ತ ರಶೀದ್ ವಿಟ್ಲ, ಉದ್ಯಮಿ ಚಾರ್ಲ್ಸ್ ಸಿಕ್ವೇರಾ, ನಿವೃತ್ತ ಯೋಧ ದಯಾನಂದ ಗೌಡ ಅವರನ್ನು ಸನ್ಮಾನಿಸಲಾಯಿತು. ಸಮ್ಮೇಳನ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಾರಾಮ ವರ್ಮ ವಿಟ್ಲ ಸ್ವಾಗತಿಸಿದರು. ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಕಾರ್ಯದರ್ಶಿ ಜಯರಾಮ ಪಡ್ರೆ ವಂದಿಸಿದರು. ವಿಂಧ್ಯಾ ಎಸ್.ರೈ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಕಾರ್ಯಕ್ರಮದ ಮೊದಲು ಮಕ್ಕಳ ಚುಟುಕು ಗೋಷ್ಠಿ, ವಿಚಾರ ಸಂಕಿರಣ, ಯಕ್ಷಗಾನ ತಾಳಮದ್ದಳೆ, ಹಿರಿಯರ ಚುಟುಕು ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.