
ಶಾಸಕ ರಾಜೇಶ್ ನಾಯ್ಕ್ ಚಾಲನೆ ನೀಡಿದರು.
ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಭೂಸುರಕ್ಷಾ ಯೋಜನೆಗೆ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚಾಲನೆ ನೀಡಿದರು.
ಈ ಸಂದರ್ಭ ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ಉಪತಹಸೀಲ್ದಾರ್ ಗಳಾದ ನರೇಂದ್ರನಾಥ ಮಿತ್ತೂರು, ದಿವಾಕರ ಮುಗುಳ್ಯ, ನವೀನ್ ಬೆಂಜನಪದವು, ಕಂದಾಯ ನಿರೀಕ್ಷಕರಾದ ಜೆ.ಜನಾರ್ದನ ಮತ್ತಿತರರು ಉಪಸ್ಥಿತರಿದ್ದರು.
ಹಳೆಯ ದುಃಸ್ಥಿತಿಯಲ್ಲಿರುವ ಭೂದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತನೆ ಮಾಡುವುದು, ರೆಕಾರ್ಡ್ ರೂಮ್ ಗಳಿಂದ ಪಡೆದುಕೊಳ್ಳಲು ಇರುವ ತೊಂದರೆ ನಿವಾರಣೆ, ಹಳೆಯ ದಾಖಲೆ ಸಂರಕ್ಷಣೆಗೆ ಅನುಕೂಲವಾಗುವ ಭೂಸುರಕ್ಷಾ ಯೋಜನೆಯಲ್ಲಿ ನೇರವಾಗಿ ಡಿಜಿಟಲ್ ಪ್ರಕ್ರಿಯೆ ಮೂಲಕ ಭೂದಾಖಲೆ ಪಡೆದುಕೊಳ್ಳುವ ಅವಕಾಶವಿದ್ದು, ನಿಮ್ಮ ದಾಖಲೆಗಳನ್ನು ನಿಮ್ಮ ಕೈಗೆ ತಲುಪಿಸುವ ಯೋಜನೆಯಾದ ಭೂಸುರಕ್ಷಾ ಯೋಜನೆಯನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ.
Be the first to comment on "ಬಂಟ್ವಾಳದಲ್ಲಿ ಭೂದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ"