ಬಂಟ್ವಾಳದ ಗೋಲ್ಡನ್‌ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿ ಸಹಯೋಗದೊಂದಿಗೆ ಬಂಟ್ವಾಳ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಹಾಗೂ ಚಿಣ್ಣರಲೋಕ ಸೇವಾಬಂಧು ಆಶ್ರಯದಲ್ಲಿ ಬಹುಸಂಸ್ಕೃತಿ ಸಂಭ್ರಮ ಮತ್ತು ಬಹುಭಾಷಾ ಕವಿ ಸಂಗಮ ನಡೆಯಿತು.
ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಉದ್ಘಾಟಿಸಿದರು. ಕರಾವಳಿ ಕಲೋತ್ಸವದ ಅಧ್ಯಕ್ಷ ಸುದರ್ಶನ್ ಜೈನ್ ಅಧ್ಯಕ್ಷತೆ ವಹಿಸಿದ್ದರು.ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್, ಅರೆಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿದರು.
ಚಿಣ್ಣರ ಅಧ್ಯಕ್ಷೆ ದಿಯಾ ರಾವ್, ಬಂಟ್ವಾಳ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಕುಚ್ಚಿಗುಡ್ಡೆ, ಬೋಳಂತೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪಾವತಿ ವೇದಿಕೆಯಲ್ಲಿದ್ದರು. ಚಿಣ್ಣರಲೋಕ ಸೇವಾಬಂಧು ಅಧ್ಯಕ್ಷ ಮೋಹನದಾಸ ಕೊಟ್ಟಾರಿ ಮುನ್ನೂರು ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಕವಿಗಳಾದ ವಿಜಯ ಬಿ.ಶೆಟ್ಟಿ ಸಾಲೆತ್ತೂರು, ಸಲೋಮಿ ಡಿಸೋಜ ಮೊಗರ್ನಾಡು, ಜಯಾನಂದ ಪೆರಾಜೆ, ಅಶ್ರಫ್ ಕಲ್ಲಡ್ಕ, ಉದಯಭಾಸ್ಕರ್ ಸುಳ್ಯ ಹಾಗೂ ಕ್ಯಾ| ಬಿದ್ದಂಡ ನಾಣಿ ದೇವಯ್ಯ ಅವರು ವಿವಿಧ ಭಾಷೆಗಳಲ್ಲಿ ಕವನ ವಾಚಿಸಿದರು. ಅನಿಲ್ ಪಂಡಿತ್ ಸ್ವಾಗತಿಸಿದರು. ಸ್ವಾಗತ ಸಮಿತಿ ಸದಸ್ಯ ಮಾಲಿಕ್ ಕೊಳಕೆ ವಂದಿಸಿದರು. ಪ್ರಜ್ವಲ್ ಸಿದ್ಧಕಟ್ಟೆ ಹಾಗೂ ಎಚ್.ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಬಂಟ್ವಾಳದಲ್ಲಿ ಬಹುಭಾಷಾ ಕವಿಗೋಷ್ಠಿ, ಬಹುಸಂಸ್ಕೃತಿ ಸಂಭ್ರಮ"