ಬಂಟ್ವಾಳ

ಬಂಟ್ವಾಳ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ ಕೋಟಿ ಚೆನ್ನಯ ಕ್ರೀಡಾಕೂಟಕ್ಕೆ ಸಕಲ ಸಿದ್ಧತೆ

ಪತ್ರಿಕಾಗೋಷ್ಠಿಯಲ್ಲಿ ಬೇಬಿ ಕುಂದರ್ ಮಾತನಾಡಿದರು.

ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಬಂಟ್ವಾಳ ತಾಲೂಕು‌ ಮಟ್ಟದ ಕೋಟಿ‌ ಚೆನ್ನಯ ಕ್ರೀಡೋತ್ಸವ ಬಿಲ್ಲವ ಸಮಾಜ ಬಾಂಧವರಿಗಾಗಿ ಜನವರಿ 19ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.

ಜಾಹೀರಾತು

ಈ ವಿಷಯವನ್ನು ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ತಂಡಗಳು ವಿವಿಧ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದು ಮಾಹಿತಿ ನೀಡಿದ ಅವರು, ಮಕ್ಕಳು, ಹಿರಿಯರು, ಮಹಿಳೆಯರು ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

ಸುಮಾರು 5 ಸಾವಿರ ಮಂದಿ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಸಾಧಕ ಸಮಾಜ ಬಾಂಧವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಯುವಕರಿಗೆ ಕ್ರೀಡಾಸ್ಫೂರ್ತಿ ಬೆಳೆಸಲು ಇದು ಸಹಕಾರಿ ಆಗಲಿದ್ದು, ಕ್ರೀಡೆಗೆ ಸಂಬಂಧಿಸಿದ ತರಬೇತಿ, ಉದ್ಯೋಗಾಧಾರಿತ ಅವಕಾಶಗಳ ಕುರಿತು ಮಾಹಿತಿ, ಸೂಕ್ತ ಬೆಂಬಲ ನೀಡಲು ಇದು ಪ್ರೋತ್ಸಾಹಕವಾಗಲಿದೆ ಎಂದರು.

ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಕ್ರೀಡೋತ್ಸವ ಉದ್ಘಾಟಿಸಲಿದ್ದಾರೆ. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಿ. ಸಂಜೀವ ಪೂಜಾರಿ, ಗುರುಕೃಪಾ ಅಧ್ಯಕ್ಷತೆ ವಹಿಸಲಿದ್ದಾರೆ. ಬಂಟ್ವಾಳ ತಾಲೂಕಿನ‌ 24 ಬಿಲ್ಲವ ಗ್ರಾಮ ಸಮಿತಿಗಳ ಆಕರ್ಷಕ ಪಥ ಸಂಚಲನ ನಡೆಯಲಿದ್ದು, ಈ ಸಂದರ್ಭ ಶಾಸಕರಾದ ಬಿ. ಕೆ. ಹರಿಪ್ರಸಾದ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ  ಎಸ್. ವಿಜಯ ಪ್ರಸಾದ್ ಧ್ವಜಾರೋಹಣ ಮಾಡಲಿದ್ದಾರೆ, ಪಡುಮಲೆ

ಕೋಟಿಚೆನ್ನಯ ಜನ್ಮಸ್ಥಾನ, ಸಂಚಲನಾ ಸಮಿತಿ, ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕ್ರೀಡಾ ಜ್ಯೋತಿ ಹಸ್ತಾಂತರಿಸಲಿದ್ದಾರೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ  ಎಚ್. ಎಸ್. ಸಾಯಿರಾಮ್, ಕೋಶಾಧಿಕಾರಿ ಆರ್ ಪದ್ಮರಾಜ್,

ಭಾರತ್ ಕೊ-ಅಪರೇಟಿವ್ ಬ್ಯಾಂಕ್ ಲಿ. ಮುಂಬೈ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾ‌ರ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ. ಎನ್. ಶಂಕರ ಪೂಜಾರಿ, ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ನಮ್ಮ ಕುಡ್ಲ ಆಡಳಿತ ನಿರ್ದೇಶಕ ಲೀಲಾಕ್ಷ ಬಿ‌ ಕರ್ಕೇರಾ, ಬಿಲ್ಲವ ಬ್ರಿಗೇಡ್ ಅಧ್ಯಕ್ಷ ಸದಾನಂದ ಪೂಜಾರಿ, ಉದ್ಯಮಿ ಸುನಿತ್ ಕಿಶನ್, ಇನ್‌ ಸ್ಪೆಕ್ಟರ್ ಆಫ್ ಪೋಲಿಸ್ ಶಾಂತಾರಾಮ್ ಕುಂದರ್, ಡೆಪ್ಯೂಟಿ ಸುಪರಿಂಟೆಂಡೆಂಟ್ ಆಫ್ ಎಕ್ಸೈಸ್ ಗಾಯತ್ರಿ ಎಂ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಹುಮಾನ ವಿತರಣೆ ಮಾಡಲಿದ್ದಾರೆ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.

ಶಾಸಕ ಉಮಾನಾಥ ಕೋಟ್ಯಾನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ದ.ಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಮುಂಬೈ ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ ಅಮೀನ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ, ಪುತ್ತೂರು ಅಕ್ಷಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಯಂತ ನಡುಬೈಲು, ತುಳುನಾಡು ಬಿರುವೆರ್ ಅಧ್ಯಕ್ಷ ಲೋಕೇಶ್ ಕೋಡಿಕೆರೆ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷೆ ಉರ್ಮೀಳಾ ರಮೇಶ್, ವೆನ್‌ಲಾಕ್ ಯುರೋಲಾಜಿ ವಿಭಾಗದ ಮುಖ್ಯಸ್ಥ ಡಾ ಸದಾನಂದ ಪೂಜಾರಿ, ಉದ್ಯಮಿ ಮನೋಜ್ ಸರಿಪಲ್ಲ, ಪ್ರಶಾಂತ್ ಸನಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬೇಬಿ ಕುಂದರ್ ತಿಳಿಸಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪ, ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಗಣೇಶ್ ಪೂಜಾರಿ ಪೂಂಜರೆಕೋಡಿ, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ  ಸುಂದರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.