ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು,ದ.ಕ.ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ,ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ,ಕುಲಶೇಖರ ಮಂಗಳೂರು,ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ,ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್,ಗ್ರಾಮ ಪಂಚಾಯತ್ ಕುಕ್ಕಿಪಾಡಿ ,ಗ್ರಾಮ ಪಂಚಾಯತ್‌ಸಂಗಬೆಟ್ಟು ,ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಇದರ ಸಂಯುಕ್ತ ಆಶ್ರಯದಲ್ಲಿ ಜಾನುವಾರು ಜಾಗೃತಿ ಶಿಬಿರ ಸೋಮವಾರ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗೋವುಗಳಿಗೆ ಹೂ ಮಾಲೆ ಹಾಕಿ, ಆರತಿ ಬೆಳಗಿ, ಗೋಗ್ರಾಸ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನ ಕುಮಾರ ಚೌಟ ಅವರು ಮಾತನಾಡಿ,ಯೋಗ್ಯ ರೀತಿಯಲ್ಲಿ ಹೈನುಗಾರಿಕೆ ನಡೆಸುವುದರಿಂದ ಉತ್ತಮ ಲಾಭ ಪಡೆಯಬಹುದು. ಇಂತಹ ಶಿಬಿರಗಳಿಂದ ಸರಿಯಾದ ಮಾರ್ಗದರ್ಶನ ಪಡಕೊಳ್ಳಬೇಕು ಎಂದು ಹೇಳಿದರು. ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಅವರು ಮಾತನಾಡಿ, ಹೈನುಗಾರಿಕೆಗೆ ಸರಕಾರ ಪ್ರೋತ್ಸಾಹಧನ ನೀಡುವ ಹೈನುಗಾರರನ್ನು ಪ್ರೋತ್ಸಾಹಿಸಬೇಕು. ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

.
ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತಾ ಎನ್.ಶೆಟ್ಟಿ, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಅಧ್ಯಕ್ಷ ಶಿವಯ್ಯ ಎಲ್., ಅರಳ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ರೂಪಾ ಜೆ.ಶೆಟ್ಟಿ, ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ಶೇಖರ ಶೆಟ್ಟಿ ಬದ್ಯಾರು, ರಾಯಿ ಹಾ.ಉ.ಸಂಘದ ಅಧ್ಯಕ್ಷ ದಿನೇಶ್ ಶೆಟ್ಟಿ ರಾಯಿ ಅತಿಥಿಗಳಾಗಿ ಭಾಗವಹಿಸಿದ್ದರು. ದ.ಕ.ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವೈದ್ಯಾಽಕಾರಿಗಳಾದ ಡಾ.ಕಾರ್ತಿಕ್, ಡಾ.ಭವಿತ್, ಡಾ. ನಿಖಿಲ್, ಡಾ.ಅಶೋಕ್, ಡಾ.ಮಾನಸ, ದ.ಕ.ಹಾಲು ಒಕ್ಕೂಟ ವಿಸ್ತರಣಾಽಕಾರಿ ಜಗದೀಶ್, ಸಿದ್ದಕಟ್ಟೆ ಹಾ.ಉ.ಸಂಘದ ಕಾರ್ಯದರ್ಶಿ ಪ್ರಭಾಕಲರ ನಾಯಕ್, ರಾಯಿ ಹಾ.ಉ.ಸಂಘದ ಕಾರ್ಯದರ್ಶಿ ಸದಾನಂದ ಗೌಡ, ವಾಮದಪದವು ಹಾ.ಉ.ಸಂಘದ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಪಶುವೈದ್ಯಕೀಯ ಸೇವಾ ಇಲಾಖೆಯ ಸಿಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ದ.ಕ.ಹಾಲು ಒಕ್ಕೂಟ ಉಪ ವ್ಯವಸ್ಥಾಪಕ ಡಾ.ಚಂದ್ರಶೇಖರ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಹೈನುರಾಸುಗಳ ನಿರ್ವಹಣೆ ಹಾಗೂ ಹೈನುರಾಸುಗಳಲ್ಲಿ ಬಂಜೆತನದ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಇಲಾಖೆ ನಡೆಸಿದ್ದ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದ ನವೀನ್ ಶೆಟ್ಟಿ ವಾಮದಪದವು, ಭರತ್ ಕುಮಾರ್ ಬುಡೋಳಿ, ಜಾನ್ ರೊನಾಲ್ಡ್ ರೊಡ್ರಿಗಸ್ ರಾಯಿ ಅವರಿಗೆ ಪ್ರಶಸ್ತಿ ವಿತರಿಸಲಾಯಿತು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಡಳಿತ ವೈದ್ಯಾಧಿಕಾರಿ ಡಾ.ಅವಿನಾಶ್ ಭಟ್ ಅವರು ಸ್ವಾಗತಿಸಿ ಪ್ರಸ್ತಾವಿಸಿದರು. ಪಶು ವೈದ್ಯಾಧಿಕಾರಿ ಡಾ. ಉಮೇಶ್ ಕಿರಣ್ ವಂದಿಸಿದರು. ನಿವೃತ್ತ ಪಶು ವೈದ್ಯಾಧಿಕಾರಿ ಶ್ರೀಧರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಸಿದ್ಧಕಟ್ಟೆ: ಜಾನುವಾರು ಜಾಗೃತಿ ಶಿಬಿರ"