ಪ್ರಮುಖ ಸುದ್ದಿಗಳು

ಕೆ.ಸಿ.ರೋಡ್ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ- ಮೂವರ ಸೆರೆ, ಬಂಧಿತರು ಯಾರು?

NEWS UPDATE:

ಜನವರಿ 17ರಂದು ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಬ್ರಾಂಚ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಟಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ತಿಳಿಸಿದ್ದಾರೆ. ತಿರುನಲ್ವೇಲಿಯ ಮುರುಗಂಡಿ ತೇವರ್, ಮುಂಬೈನ ಯುಸೊವಾ ರಾಜೆಂದ್ರನ್, ಮುಂಬಯಿ ನಿವಾಸಿ ಕಣ್ಣನ್ ಮಣಿ ಬಂಧಿತ ಆರೋಪಿಗಳು

ಜಾಹೀರಾತು

ಮಂಗಳೂರು:ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ಅವರು ತಿಳಿಸಿದ್ದಾರೆ.ಬಂಧಿತ ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳು ಮತ್ತು ಗೋಣಿಚೀಲಗಳನ್ನು ಕೂಡ ವಶ ಪಡಿಸಿಕೊಂಡಿರುವ ಬಗ್ಗೆ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣ ಭೇದಿಸಲು ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದ್ದರು. ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರನ್ನು ಬೆನ್ನಟ್ಟಿ ಪೊಲೀಸ ತಂಡಗಳು ಕಾರ್ಯಾಚರಣೆಗೆ ಇಳಿದಿದ್ದವು.ದರೋಡೆ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.