ಸಾಹಿತ್ಯದ ಬಗೆಗಿನ ಆಸಕ್ತಿಯು ಹಾದಿ ತಪ್ಪಿಸುವುದಿಲ್ಲ. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಗಳ ಮೂಲಕವೇ ನಮಗೆ ಬೇಕಾದ ಪುಸ್ತಗಳನ್ನು ಓದಬಹುದು. ಸಾಹಿತ್ಯದ ಅಧ್ಯಯನ ನಮ್ಮ ಅಂಗೈಯಲ್ಲೇ ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾದ ಬಿಂದಿಯಾ ನಾಯಕ್ ಹೇಳಿದರು.
ಜಾಹೀರಾತು
ಪಾಣೆಮಂಗಳೂರಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕದಿಂದ ನಡೆದ ಸಾಹಿತ್ಯ ಸಂಭ್ರಮ- 8 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಾಹಿತಿ ಹಾಗೂ ಮುಖ್ಯ ಶಿಕ್ಷಕ ಜಯರಾಮ ಪಡ್ರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಲಯದ ಮೇಲ್ವಿಚಾರಕ ವಿಶ್ವನಾಥ ಉಪಸ್ಥಿತರಿದ್ದು ಶುಭ ಹಾರೈಸಿದರು. ಕ.ರಾ.ಮ.ಸಾ.ಪ. ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಕಲಾ ಕಾರಂತ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜತೆ ಕಾರ್ಯದರ್ಶಿ ರಶ್ಮಿತಾ ಸುರೇಶ್ ಜೋಗಿಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿಲಯದ ಸಿಬ್ಬಂದಿ ರಮೇಶ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಗೋಪಾಲಕೃಷ್ಣ ನೇರಳಕಟ್ಟೆ ಕವನ ರಚನೆಯ ಬಗ್ಗೆ ಮತ್ತು ತುಳಸಿ ಕೈರಂಗಳ ಕಥಾ ರಚನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸಿಕೊಟ್ಟರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಾಹಿತ್ಯದ ಆಸಕ್ತಿಯಿಂದ ಸರಿಯಾದ ಪಥದಲ್ಲಿ ಸಾಗಲು ಸಾಧ್ಯ: ಬಿಂದಿಯಾ ನಾಯಕ್"
Be the first to comment on "ಸಾಹಿತ್ಯದ ಆಸಕ್ತಿಯಿಂದ ಸರಿಯಾದ ಪಥದಲ್ಲಿ ಸಾಗಲು ಸಾಧ್ಯ: ಬಿಂದಿಯಾ ನಾಯಕ್"