ಪದ್ಮನಾಭ ರೈ
ಪದ್ಮನಾಭ ರೈ
ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷರಾಗಿ ಗೋಳ್ತಮಜಲಿನ ಕೆ. ಪದ್ಮನಾಭ ರೈ ಅವರು ಪುನರಾಯ್ಕೆಯಾಗಿದ್ದಾರೆ.
ದ.ಕ.ಜಿಲ್ಲಾ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ರಾಜ್ಯ ಕೃಷಿಕ ಸಮಾಜದ ಪ್ರತಿನಿಧಿಗಳ ಆಯ್ಕೆ ಸಂಬಂಧ ಚುನಾವಣೆಯಲ್ಲಿ ಬಂಟ್ವಾಳ ತಾಲೂಕು ಕೃಷಿಕ ಸಮಾಜದಿಂದ ಆಯ್ಕೆಯಾದ ಪದ್ಮನಾಭ ರೈ ಅವರು ರಾಜ್ಯ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದರು. ಇವರು ಬಂಟ್ವಾಳ ತಾ.ಪಂ., ಎಪಿಎಂಸಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್,ತಾಲೂಕು ಕಾಂಗ್ರೆಸ್ ಸೇವಾದಳದ ಮಾಜಿ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸಿದ್ದರಲ್ಲದೆ ನೆಟ್ಲ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.