ಬೋಳಂತೂರು ಉದ್ಯಮಿ ಮನೆಗೆ ಇಡಿ ಅಧಿಕಾರಿಗಳೆಂದು ನಂಬಿಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈತ ಕೇರಳ ದ ಅನಿಲ್ ಫೆರ್ನಾಂಡೀಸ್ ಎಂದು ಗುರುತಿಸಲಾಗಿದೆ.
ಈ ಕುರಿತು ಪೊಲೀಸರು ನೀಡಿರುವ ಪತ್ರಿಕಾ ಹೇಳಿಕೆ ಹೀಗಿದೆ.
ದಿನಾಂಕ;03-01-2025 ರಂದು ರಾತ್ರಿ, ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿ, ದಿನಾಂಕ:23-01-2025 ರಂದು ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತನಾದ ಅನಿಲ್ ಫರ್ನಾಂಡಿಸ್ ಪ್ರಾಯ 49 ವರ್ಷ, ವಾಸ:ಯಸುದಾಸ್ ಲಿಯೋನ್ ಫರ್ನಾಂಡಿಸ್ , ಟ್ರಿನಿಟಿ ವಿಲ್ಲಾ ಚಿರಕರ್ ಜಂಕ್ಷನ್ ಮಾತಿಲಿಲ್ ಅಂಚೆ, ತ್ರಿಕ್ಕಡವೂರ್ ,ಪೆರಿನಾಡ್, ಕೊಲ್ಲಂ ಜಿಲ್ಲೆ ಕೇರಳ ರಾಜ್ಯ. ಹಾಲಿ ವಾಸ:ಪಲವಿಲ್ಲ ಮನೆ, ಮಾತಿಲಿಲ್, ಅಂಚೆ ತ್ರಿಕ್ಕಡವೂರ್ ಪೆರಿನಾಡ್, ಕೊಲ್ಲಂ ಜಿಲ್ಲೆ ಕೇರಳ ರಾಜ್ಯ ಎಂಬಾತನನ್ನು ಬಂಧಿಸಿ, ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ನಂಬ್ರದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಬಹುದು. ಸದ್ರಿ ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿಗೆ ಬಾಕಿ ಇರುತ್ತದೆ. ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿರುತ್ತದೆ.
Harish Mambady2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ