ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ನಡೆಸಲಾಯಿತು. ತಹಸೀಲ್ದಾರ್ ಡಿ ಅರ್ಚನಾ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಮತದಾರರ ಜಾಗೃತಿಗಾಗಿ ಪ್ರತೀ ವರ್ಷ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನದಂದು ಮಾತ್ರವಲ್ಲದೆ ವರ್ಷಪೂರ್ತಿ ಮತದಾರರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತರಾಗಿರಬೇಕು ಎಂದರು.
ಜಾಹೀರಾತು
ಈ ಸಂದರ್ಭ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಚುನಾವಣೆ ಶಾಖೆಯ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಆಹಾರ ಶಿರಸ್ತೇದಾರ್ ಶಿವಪ್ರಸಾದ್, ಚುನಾವಣೆ ವಿಷಯ ನಿರ್ವಾಹಕ ಕೆ.ಎಚ್.ಮಂಜುನಾಥ್, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ .ಎಂ.ಎನ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ ತಾಲೂಕು ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ"
Be the first to comment on "ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ"