ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ನಡೆಸಲಾಯಿತು. ತಹಸೀಲ್ದಾರ್ ಡಿ ಅರ್ಚನಾ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಮತದಾರರ ಜಾಗೃತಿಗಾಗಿ ಪ್ರತೀ ವರ್ಷ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನದಂದು ಮಾತ್ರವಲ್ಲದೆ ವರ್ಷಪೂರ್ತಿ ಮತದಾರರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತರಾಗಿರಬೇಕು ಎಂದರು.
ಈ ಸಂದರ್ಭ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಚುನಾವಣೆ ಶಾಖೆಯ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಆಹಾರ ಶಿರಸ್ತೇದಾರ್ ಶಿವಪ್ರಸಾದ್, ಚುನಾವಣೆ ವಿಷಯ ನಿರ್ವಾಹಕ ಕೆ.ಎಚ್.ಮಂಜುನಾಥ್, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ .ಎಂ.ಎನ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ ತಾಲೂಕು ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.
(more…)
(more…)