ಪ್ರಜಾಪ್ರಭುತ್ವದ ಅಂಗಗಳು ಸರಿಯಾಗಿ ಕೆಲಸ ಮಾಡಿದರೆ, ದೇಶದ ಪ್ರಗತಿ ಸಾಧ್ಯ. ಬಹಳಷ್ಟು ಸಮಸ್ಯೆಗಳೂ ಇದರಿಂದ ಪರಿಹಾರವಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು. ಹೇಳಿದರು.
ಭಾನುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ 76ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಗಣರಾಜ್ಯೋತ್ಸವ ಸಂದೇಶ ನೀಡಿ, ನಮ್ಮ ದೇಶದ ಸಂವಿಧಾನದ ಮಹತ್ವವನ್ನು ಅರಿಯಬೇಕಾದರೆ, ಸಂವಿಧಾನದ ಆಳಕ್ಕೆ ಹೋಗಬೇಕು, ದೇಶದ ಎಲ್ಲರಿಗೂ ಸಮಾನ ಅವಕಾಶಗಳನ್ನು ನಮ್ಮ ಸಂವಿಧಾನ ನೀಡಿದ್ದು, ಪ್ರಜಾಪ್ರಭುತ್ವದ ಮಹತ್ವ ಅರಿತು ಕೆಲಸ ಮಾಡಬೇಕಾಗಿದೆ ಎಂದರು.
ಪ್ರಧಾನ ಭಾಷಣ ಮಾಡಿದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಏಳನೇ ತರಗತಿ ವಿದ್ಯಾರ್ಥಿ ನಿನಾದ್ ಕೈರಂಗಳ, ದೇಶದ ಪ್ರಗತಿಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಗತ್ಯ ಕುರಿತು ಹೇಳಿದರು.
ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಶುಭ ಹಾರೈಸಿದರು. ಈ ಸಂದರ್ಭ ಸಾಧಕರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ವಂದಿಸಿದರು. ತಾಲೂಕು ಕಚೇರಿ ಸಿಬ್ಬಂದಿ ಶ್ರೀಕಲಾ ಕಾರಂತ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಪ್ರಜಾಪ್ರಭುತ್ವದ ಸ್ತಂಭಗಳು ಸರಿಯಾಗಿ ಕೆಲಸ ಮಾಡಿದರೆ ಪ್ರಗತಿ: ರಾಜೇಶ್ ನಾಯ್ಕ್"