ಮನರಂಜನೆ

ಕುತೂಹಲಭರಿತ ಕಥೆ, ಎರಡು ಹೊಸ ಧಾರಾವಾಹಿಗಳು – ವಧು ಹಾಗೂ ಯಜಮಾನ ನೋಡಲು ಕಲರ್ಸ್ ಕನ್ನಡ ಚಾನೆಲ್ ವೀಕ್ಷಿಸಬೇಕು

ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ  ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ.  ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು  ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರ.

ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರ.  ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ  ‘ವಧು’ ಒಬ್ಬ ಅವಿವಾಹಿತೆ,  ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು ಮಾಡುತ್ತದೆ. ಮೋಸ್ಟ್  ಸಕ್ಸಸ್ ಫುಲ್  ಬ್ಯುಸಿನೆಸ್ ಮ್ಯಾನ್  ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ