ಹಿರಿಯರು ಭಗವಂತನ ಕೊಂಡಿಗಳು. ಆ ಕೊಂಡಿ ಕಳಚಿಹೋಗದಂತೆ ನೋಡಿಕೊಳ್ಳಬೇಕು. ಶೀಘ್ರದಲ್ಲೇ ವಾನಪ್ರಸ್ಥ ಅಗ್ರಹಾರ ನಿರ್ಮಾಣ ಮಾಡಲಾಗುವುದು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಸೇವಾ ಸಮಿತಿ, ಕ್ರಿಯಾ ಸಮಿತಿ, ಹವ್ಯಕಮಹಾಮಂಡಲ, ಮಂಗಳೂರು, ಉಪ್ಪಿನಂಗಡಿ ಮತ್ತು ಮುಳ್ಳೇರಿಯ ಹವ್ಯಕ ಮಂಡಲಗಳು ಆಯೋಜಿಸಿದ ಸಂಧ್ಯಾ ಮಂಗಲ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಶಕಟಪುರ ಶ್ರೀ ಕೃಷ್ಣಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, 60 ವರ್ಷ ಮೀರಿದವರಿಗೆ ಸಂಧ್ಯಾ ಮಂಗಲ ಕಾರ್ಯಕ್ರಮ ಮರುಜನ್ಮ ನೀಡಿದೆ. ಮುಂದಿನ ಭವಿಷ್ಯ ಉಜ್ವಲವಾಗಲೆಂದು ಹೇಳಿದರು.
ಮಠದ ಪ್ರಶಸನಾಧಿಕಾರಿ ಸಂತೋಷ್ ಹೆಗಡೆ, ಪಿಆರ್ ಒ ಹರಿಪ್ರಸಾದ್ ಪೆರಿಯಾಪು, ಮಾಣಿಮಠ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಮಹಾಮಂಡಲ ಅಧ್ಯಕ್ಷ ಮೋಹನಭಾಸ್ಕರ ಹೆಗಡೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಉಪಾಧ್ಯಕ್ಷ ಬಾಲಸುಬ್ರಹ್ಮಣ್ಯ ಸರ್ಪಮಲೆ, ವಿವಿವಿ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಮಂಗಳೂರು ಮಂಡಲ ಅಧ್ಯಕ್ಷ ಉದಯಶಂಕರ್ ನೀರ್ಪಾಜೆ, ಉಪಾಧ್ಯಕ್ಷ ರಾಜಶೇಖರ ಕಾಕುಂಜೆ, ಕಾರ್ಯದರ್ಶಿ ರಮೇಶ್ ಭಟ್ ಸರವು, ಮಂಗಳೂರು ಮಂಡಲ ಪ್ರಧಾನ ಗುರಿಕ್ಕಾರರಾದ ಉದಯ ಕುಮಾರ ಖಂಡಿಗ, ಉಪ್ಪಿನಂಗಡಿ ಮಂಡಲಾಧ್ಯಕ್ಷ ಈಶ್ವರಪ್ರಸನ್ನ ಪೆರ್ನೆಕೋಡಿ, ಕಾರ್ಯದರ್ಶಿ ಮಹೇಶ ಭಟ್, ಮುಳ್ಳೇರಿಯ ಮಂಡಲಾಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ಕಾರ್ಯದರ್ಶಿ ಸುರೇಶ್ ಭಟ್, ಮಾತೃತ್ವಮ್ ಸಂಘಟನೆ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತಿತರರು ಉಪಸ್ಥಿತರಿದ್ದರು
Be the first to comment on "ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಸಂಧ್ಯಾಮಂಗಲ – ಹಿರಿಯರ ರಕ್ಷಣೆ ನಮ್ಮೆಲ್ಲರ ಕರ್ತವ್ಯ: ರಾಘವೇಶ್ವರ ಸ್ವಾಮೀಜಿ"