ಕಲ್ಲಡ್ಕ

ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಸಂಧ್ಯಾಮಂಗಲ – ಹಿರಿಯರ ರಕ್ಷಣೆ ನಮ್ಮೆಲ್ಲರ ಕರ್ತವ್ಯ: ರಾಘವೇಶ್ವರ ಸ್ವಾಮೀಜಿ

 

ಜಾಹೀರಾತು

ಹಿರಿಯರು ಭಗವಂತನ ಕೊಂಡಿಗಳು. ಆ ಕೊಂಡಿ ಕಳಚಿಹೋಗದಂತೆ ನೋಡಿಕೊಳ್ಳಬೇಕು. ಶೀಘ್ರದಲ್ಲೇ ವಾನಪ್ರಸ್ಥ ಅಗ್ರಹಾರ ನಿರ್ಮಾಣ ಮಾಡಲಾಗುವುದು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ  ಸ್ವಾಮೀಜಿ ಹೇಳಿದರು.

ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಸೇವಾ ಸಮಿತಿ, ಕ್ರಿಯಾ ಸಮಿತಿ, ಹವ್ಯಕ‌ಮಹಾಮಂಡಲ, ಮಂಗಳೂರು, ಉಪ್ಪಿನಂಗಡಿ ಮತ್ತು ಮುಳ್ಳೇರಿಯ ಹವ್ಯಕ ಮಂಡಲಗಳು ಆಯೋಜಿಸಿದ ಸಂಧ್ಯಾ ಮಂಗಲ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಶಕಟಪುರ ಶ್ರೀ ಕೃಷ್ಣಾನಂದ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, 60 ವರ್ಷ ಮೀರಿದವರಿಗೆ ಸಂಧ್ಯಾ ಮಂಗಲ ಕಾರ್ಯಕ್ರಮ ಮರುಜನ್ಮ ನೀಡಿದೆ. ಮುಂದಿನ ಭವಿಷ್ಯ ಉಜ್ವಲವಾಗಲೆಂದು ಹೇಳಿದರು.

ಮಠದ ಪ್ರಶಸನಾಧಿಕಾರಿ ಸಂತೋಷ್ ಹೆಗಡೆ, ಪಿಆರ್ ಒ ಹರಿಪ್ರಸಾದ್ ಪೆರಿಯಾಪು, ಮಾಣಿಮಠ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಮಹಾಮಂಡಲ ಅಧ್ಯಕ್ಷ ‌ಮೋಹನಭಾಸ್ಕರ ಹೆಗಡೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಉಪಾಧ್ಯಕ್ಷ ಬಾಲಸುಬ್ರಹ್ಮಣ್ಯ ಸರ್ಪಮಲೆ, ವಿವಿವಿ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ,  ಮಂಗಳೂರು ಮಂಡಲ ಅಧ್ಯಕ್ಷ ಉದಯಶಂಕರ್ ನೀರ್ಪಾಜೆ,  ಉಪಾಧ್ಯಕ್ಷ ರಾಜಶೇಖರ ಕಾಕುಂಜೆ, ಕಾರ್ಯದರ್ಶಿ ರಮೇಶ್ ಭಟ್ ಸರವು, ಮಂಗಳೂರು ಮಂಡಲ ಪ್ರಧಾನ ಗುರಿಕ್ಕಾರರಾದ ಉದಯ ಕುಮಾರ ಖಂಡಿಗ, ಉಪ್ಪಿನಂಗಡಿ ಮಂಡಲಾಧ್ಯಕ್ಷ ಈಶ್ವರಪ್ರಸನ್ನ ಪೆರ್ನೆಕೋಡಿ, ಕಾರ್ಯದರ್ಶಿ ಮಹೇಶ ಭಟ್, ಮುಳ್ಳೇರಿಯ ಮಂಡಲಾಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ಕಾರ್ಯದರ್ಶಿ ಸುರೇಶ್ ಭಟ್,  ಮಾತೃತ್ವಮ್ ಸಂಘಟನೆ ಅಧ್ಯಕ್ಷೆ ಈಶ್ವರಿ ಬೇರ್ಕಡವು ಮತ್ತಿತರರು ಉಪಸ್ಥಿತರಿದ್ದರು

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago