https://www.opticworld.net/
ಸವಿತಾ ಮಹರ್ಷಿಯವರು ಆದರ್ಶ ಪುರುಷರಾಗಿ ತಮ್ಮ ಸಮಾಜದ ಶ್ರೇಷ್ಠತೆಗೆ ಶ್ರಮಿಸಿದವರು. ತಮ್ಮ ಅನುಯಾಯಿಗಳಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಮಾಡಿದವರು ಎಂದು ಬಂಟ್ವಾಳ ತಾಲೂಕು ತಹಶೀಲ್ದಾರ್ ಡಿ ಅರ್ಚನಾ ಭಟ್ ಅಭಿಪ್ರಾಯ ಪಟ್ಟರು.
ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸವಿತಾ ಜಯಂತಿ ಆಚರಣೆಯಲ್ಲಿ ದೀಪ ಬೆಳಗಿಸಿ ಮಾತನಾಡಿದರು.
ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ,
ಕೇಂದ್ರ ಸ್ಥಾನಿಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಶು ಕುಮಾರ್, ತಾಲೂಕು ಕಛೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.