ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಪ್ರಭಾಕರ ಪ್ರಭು ಪುನರಾಯ್ಕೆಯಾಗಿದ್ದಾರೆ. ಸಂಘದ ಕಚೇರಿ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಸುಪರಿಟೆಂಡೆಂಟ್ ಗೋಪಾಲ್ ಚುನಾವಣಾಧಿಕಾರಿಯಾಗಿದ್ದು, ಸಿಇಒ ಆರತಿ ಶೆಟ್ಟಿ ಮತ್ತು ಸಿಬ್ಬಂದಿ ಸಹಕರಿಸಿದರು. ಉಪಾಧ್ಯಕ್ಷರಾಗಿ ಸಂದೇಶ್ ಶೆಟ್ಟಿ ಪೊಡುಂಬ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ದಿನೇಶ್ ಪೂಜಾರಿ, ಎ.ಶಿವ ಗೌಡ, ಸತೀಶ್ ಪೂಜಾರಿ, ಪುಷ್ಪಲತಾ ಎನ್. ಆರ್, ಮಂದಾರತಿ ಶೆಟ್ಟಿ, ವೀರಪ್ಪ ಪರವ, ಜಾರಪ್ಪ ನಾಯ್ಕ್, ವಿಶ್ವನಾಥ ಶೆಟ್ಟಿಗಾರ್ ಹಾಜರಿದ್ದರು.