ಬಂಟ್ವಾಳ

ವಿಶ್ವ ಕ್ಯಾನ್ಸರ್ ದಿನ: ಕನ್ನಡ ಭವನದಲ್ಲಿ ಆರೋಗ್ಯ ಮಾಹಿತಿ, ತಪಾಸಣೆ

 

ಜಾಹೀರಾತು

ಜೆಸಿಐ ಬಂಟ್ವಾಳ, ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕನ್ನಡ ಸಾಹಿತ್ಯ ಪರಿಷತ್ತು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ವಲಯ ಸಹಯೋಗದಲ್ಲಿ ಮಂಗಳೂರಿನ ಎ.ಜೆ.  ವೈದ್ಯಕೀಯ ಮಹಾವಿದ್ಯಾಲಯ ಸಹಕಾರದೊಂದಿಗೆ ವಿಶ್ವ ಕಾನ್ಸರ್ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಮತ್ತು ಆರೋಗ್ಯ ಉಚಿತ ತಪಾಸಣಾ ಶಿಬಿರ ಬಂಟ್ವಾಳದ ಬಿ.ಸಿ.ರೋಡಿನಲ್ಲಿರುವ ಕನ್ನಡ ಭವನದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಶಿಬಿರ ಉದ್ಘಾಟಿಸಿ ಮಾತನಾಡಿ ಸರಿಯಾದ ಆಹಾರ ಕ್ರಮ, ಶಿಸ್ತುಬದ್ಧ ಜೀವನ ಹಾಗೂ ದೃಢ ಮನಸ್ಸಿನಿಂದ ಕ್ಯಾನ್ಸರ್ ರೋಗದಿಂದ ಗುಣಮುಖರಾಗಲು ಸಾಧ್ಯವಿದೆ ಎಂದರು.

ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಶ್ರುತಿ, ಎ.ಜೆ. ಆಸ್ಪತ್ರೆಯ ಸಮುದಾಯ ಆರೋಗ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಾಮನ ನಾಯಕ್, ಜೆಸಿಐ ಬಂಟ್ವಾಳದ ನಿಕಟಪೂವಾಧ್ಯಕ್ಷೆ ರಶ್ಮಿ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಸದಾನಂದ ಬಂಗೇರ ಉಪಸ್ಥಿತರಿದ್ದರು.

ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ದಂತ ವೈದ್ಯಾಧಿಕಾರಿ ಡಾ. ಆರತಿ, ಎ.ಜೆ. ಆಸ್ಪತ್ರೆಯ ಸಮುದಾಯ ಆರೋಗ್ಯ ವಿಭಾಗದ ಡಾ. ಶ್ರೀಶಾನಂದ ಕ್ಯಾನ್ಸರ್ ರೋಗದ ಬಗ್ಗೆ ಆರೋಗ್ಯ ಮಾಹಿತಿ ನೀಡಿದರು. ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ ವಂದಿಸಿದರು. ಕೋಶಾಧಿಕಾರಿ ಜೀವಿತ ಯತೀಶ್ ಕರ್ಕೇರಾ, ಪೂರ್ವಾಧ್ಯಕ್ಷರಾದ ಯತೀಶ್ ಕರ್ಕೆರಾ, ರಾಜೇಂದ್ರ ಕೆ, ಉಪಾಧ್ಯಕ್ಷ ಉಮೇಶ್ ಪೂಜಾರಿ ಸಹಕರಿಸಿದರು. ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಎ.ಜೆ.  ವೈದ್ಯಕೀಯ ಮಹಾವಿದ್ಯಾಲಯದ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ರಾಜ್ಯಮಟ್ಟದ ಕೃಷಿ ಪ್ರಶಸ್ತಿ, ಬಂಟ್ವಾಳದ ಇಬ್ಬರು ಸೇರಿ ದ.ಕ.ಜಿಲ್ಲೆಯ ಆರು ಮಂದಿಗೆ ಗೌರವ – Details

| ಬಂಟ್ವಾಳ ತಾಲೂಕಿನ ಡಾಲಿ ಜಾನ್ ಅವರಿಗೆ ಕೃಷಿ ಪಂಡಿತ ಪ್ರಶಸ್ತಿ, ಲೀಲಾ ಗೌಡ ಅವರಿಗೆ ಕೃಷಿ ಪ್ರಶಸ್ತಿ (more…)

1 day ago