ಪ್ರಮುಖ ಸುದ್ದಿಗಳು

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

https://www.opticworld.net/

ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ ಎದುರಿಸುತ್ತಿರುವ ಮೂಲಸೌಕರ್ಯ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ.

ಜಾಹೀರಾತು

ಕ್ಯಾ. ಚೌಟ ಅವರು ಇತ್ತೀಚೆಗೆ ಮಂಗಳೂರಿನ ಇಎಸ್ಐ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾಗ ಅಲ್ಲಿ ದೂರದ ಊರುಗಳಿಂದ ಚಿಕಿತ್ಸೆಗೆ ಬಂದ ರೋಗಿಗಳು ಸರ್ವರ್ ಸಮಸ್ಯೆ ಸೇರಿದಂತೆ ಹಲವು ರೀತಿ ತೊಂದರೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿತ್ತು. ಇಎಸ್ಐ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಕ್ಯಾ. ಚೌಟ ಅವರು ಅದಕ್ಕೆ ಶಾಶ್ವತ ಪರಿಹಾರ ಒದಗಿಸುವ ಹಿನ್ನಲೆಯಲ್ಲಿ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಇಎಸ್ಐ ಆಸ್ಪತ್ರೆಯಲ್ಲಿ ಅರ್ಹರಿಗೆ ಲಭಿಸುವ ಸೌಲಭ್ಯಗಳಿಗೆ ಸಂಬಂಧಿಸಿದ ಎದುರಿಸುತ್ತಿರುವ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದಾರೆ.

ಕೆಲವು ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ(PSU) ಗುತ್ತಿಗೆ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯಗಳು ಲಭ್ಯವಿಲ್ಲದಿರುವ ವಿಷಯದ ಬಗ್ಗೆಯೂ ಈ ವೇಳೆ ಚರ್ಚಿಸಲಾಯಿತು. 10ಕ್ಕಿಂತ ಹೆಚ್ಚು ಗುತ್ತಿಗೆ ಕಾರ್ಮಿಕರನ್ನು ಹೊಂದಿರುವ ಯಾವುದೇ ಕಂಪನಿಯು ಇಎಸ್ಐಸಿ ಅಡಿಯಲ್ಲಿ ನೋಂದಾಯಿಸುವುದು ಕಡ್ಡಾಯ ಎಂದು ಡಿಜಿ ಸಿಂಗ್ ಅವರು ಇದೇವೇಳೆ ತಿಳಿಸಿದ್ದಾರೆ.

 ಇಎಸ್ಐಸಿ ಪ್ರಸ್ತುತ ಸೌಲಭ್ಯಗಳನ್ನು ಪಡೆಯುವುದಕ್ಕೆ ಗುತ್ತಿಗೆ ಕಾರ್ಮಿಕರೂ ಅರ್ಹರಾಗಿದ್ದಾರೆ. ಆದರೆ, ಮಂಗಳೂರಿನ ಕೆಲವು ಪಿಎಸ್ಯುಗಳಲ್ಲಿನ ಗುತ್ತಿಗೆ ಕಾರ್ಮಿಕರಿಗೂ ಇಎಸ್ಐ ವೈದ್ಯಕೀಯ ಸೌಲಭ್ಯ ನಿರಾಕರಿಸುತ್ತಿರುವುದು ಹಾಗೂ ಪ್ರಸ್ತುತ 21,000ರೂ. ವೇತನದ ಮಿತಿಗಿಂತ ಹೆಚ್ಚು ಗಳಿಸುವ ಕಾರ್ಮಿಕರನ್ನು ಕೂಡ ಇಎಸ್ಐಸಿ ವೈದ್ಯಕೀಯ ಪ್ರಯೋಜನಗಳನ್ನು ಪಡೆಯಲು ಅರ್ಹರನ್ನಾಗಿ ಮಾಡುವ ಅಗತ್ಯತೆ ಬಗ್ಗೆಯೂ ಕ್ಯಾ. ಚೌಟ ಅವರು ಇಎಸ್ಐಸಿ ಡಿಜಿಯೊಂದಿಗೆ ಸುಧೀರ್ಘವಾಗಿ ಚರ್ಚಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts