ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಕಟ್ಟಡಗಳಿಗೆ ನಿನ್ನೆ ರಾತ್ರಿ ಅಗ್ನಿ ಆಕಸ್ಮಿಕದಿಂದ ಸಮಸ್ಯೆ ಉಂಟಾಯಿತು.
https://www.opticworld.net/
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು, ರಾತ್ರಿ 1.00 ಗಂಟೆಗೆ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿ, ಮನೆಮಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.