ಬಂಟ್ವಾಳ

ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಜಯಾನಂದ ಪೆರಾಜೆ

ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ  ಹಿರಿಯ ಪತ್ರಕರ್ತ ಸಾಹಿತಿ ಬಂಟ್ವಾಳ ತಾಲೂಕಿನ ಜಯಾನಂದ ಪೆರಾಜೆ ಆಯ್ಕೆಯಾಗಿದ್ದು, ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕ ಸಂಚಾಲಕ ಡಾ.ವಾಮನ ರಾವ್ ಬೇಕಲ್ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭ ನೆರವೇರಿತು.

https://www.opticworld.net/

ರಾಜ್ಯ ಮಹಿಳಾ ಸಂಚಾಲಕಿಯಾಗಿ ಡಾ. ಶಾಂತ ಪುತ್ತೂರು,  ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕವಿ ವಿರಾಜ್ ಅಡೂರು , ಗೌರವ ಅಧ್ಯಕ್ಷರಾಗಿ ಶಿಕ್ಷಣ ತಜ್ಞ  ವಿ.ಬಿ ಕುಳಮರ್ವ, ಕೋಶಾಧಿಕಾರಿಯಾಗಿ ಸಂಧ್ಯಾರಾಣಿ ಬೇಕಲ್ ಅಧಿಕಾರ ಸ್ವೀಕರಿಸಿದರು. ವಿವಿಧ ಪದಾಧಿಕಾರಿಗಳನ್ನು ಘೋಷಿಸಲಾಯಿತು.

ಜಾಹೀರಾತು

ಕೇಂದ್ರದ ಪ್ರಧಾನ ಸಮಿತಿ ಕಚೇರಿ ಮುಳ್ಳಿಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ  ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ  ಅಧ್ಯಕ್ಷ ಡಾ. ಮಾನಸ ಮೈಸೂರು  ಅವರು ಕನ್ನಡ ಧ್ವಜವನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ , ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ  ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಕವಯಿತ್ರಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ. ಎ. ಶ್ರೀನಾಥ್ , ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಶುಭ ಹಾರೈಸಿದರು.  ಡಾ.ವಾಮನ ರಾವ್ ಬೇಕಲ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಪರಿಷತ್ತಿನ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ಚುಟುಕು ಸಾಹಿತಿ ವಿರಾಜ್ ಅಡೂರ ಅಧ್ಯಕ್ಷತೆಯಲ್ಲಿ ಅಂತಾರಾಜ್ಯ ಮಟ್ಟದ ಚುಟುಕು ಕವಿ ಗೋಷ್ಠಿ ನಡೆಯಿತು. ಕ.ಸಾ.ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು.  ನರಸಿಂಹ ಭಟ್ ಏತಡ್ಕ ವಂದಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts