https://www.opticworld.net/
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಹಾಗೂ ದೊಡ್ಡರಂಗಪೂಜೆ ಉತ್ಸವ ಮಾರ್ಚ್ ೧ರಿಂದ ೭ರವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
FOR VIDEO CLICK HERE
ಪೊಳಲಿಯಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶ್ರೀ ದೇವಳದಲ್ಲಿ ಅಷ್ಟಮಂಗಳ ಪ್ರಶ್ನೆಯಲ್ಲಿ ಕಂಡುಬಂದಂತೆ ಪರಿಹಾರವಾಗಿ ಮಾರ್ಚ್ ೫ರಂದು ಸಾವಿರ ಸೀಮೆಯವರು ಸೇರಿ ಶತಚಂಡಿಕಾಯಾಗ ನೆರವೇರಲಿದೆ. ಮಾರ್ಚ್ ೬ ರಂದು ಸೇವಾ ರೂಪದಲ್ಲಿ ದೊಡ್ಡರಂಗಪೂಜೆ ನಡೆಯಲಿದ್ದು, ಆ ಪ್ರಯುಕ್ತ ಮಾರ್ಚ್ ೧ರಿಂದಲೇ ನಾನಾ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದರು.
ಮಾರ್ಚ್ ೧ರಂದು ಶನಿವಾರ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ ಸಪ್ತಸತಿ ಪಾರಾಯಣ ಆರಂಭ, ನವಾಕ್ಷರೀ ಜಪ, ೨ರಂದು ಬೆಳಿಗ್ಗೆ ಪಾರಾಯಣ, ನವಾಕ್ಷರೀ ಮೃತ್ಯುಂಜಯ ಹೋಮ, ಸುಬ್ರಹ್ಮಣ್ಯ ಸಹಸ್ರನಾಮ ಹೋಮ ಸಾಯಂಕಾಲ ಶ್ರೀಚಕ್ರಪೂಜೆ, ೩ರಂದು ಪಾರಾಯಣ, ನವಾಕ್ಷರೀ ಜಪ. ನಮ ಹೋಮ.,೪ರಂದು ಕಾಳಿ ಸಹಸ್ರನಾಮಹೋಮ, ಸಹ ಪಾರಾಯಣ ಆರಂಭ, ನವಾಕ್ಷರೀ ಜಪ, ಸಾಯಂಕಾಲ ಮಂಟಪ ಸಂಸ್ಕಾರ, ಪ್ರಾಸಾದ ರಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜೆ, ಅಗ್ನಿ ಜನನ ಸಂಸ್ಕಾರ, ೫ರಂದು ಬುಧವಾರ ಶತಚಂಡಿಕಾಯಾಗ, ೬ರಂದು ದೊಡ್ಡ ರಂಗಪೂಜೆ ಉತ್ಸವ ಸಂಜೆ ದೊಡ್ಡರಂಗಪೂಜೆ ೮.೩೦ರಿಂದ ಬಲಿ ಉತ್ಸವ, ಬೆಳ್ಳಿ ರವ ಚಂದ್ರಮಂಡಲ ರಥ, ಸಣ್ಣ ರಥೋತ್ಸವ, ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದರು. ೭ರಂದು ಕಲಶಪೂಜೆ, ಗಣಪತಿಹೋಮ ಸೋಮ, ಸಂಪ್ರೋಕ್ಷಣೆ, ಮಂತ್ರಾಕ್ಷತೆ ನಡೆಯಲಿದೆ ಎಂದು ವಿವರ ನೀಡಿದರು.
ಶತಚಂಡಿಕಾಯಾಗದ ಪೂರ್ವಸಿದ್ಧತೆಯ ಬಗ್ಗೆ ಸಾವಿರ ಸೀಮೆಯ ಸಭೆಯನ್ನು ಈಗಾಗಲೇ ನಡೆಸಲಾಗಿದೆ. ಶತಚಂಡಿಕಾಯಾಗ ಹಾಗೂ ದೊಡ್ಡರಂಗಪೂಜೆಗೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ೧೫ ಎಕ್ರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲು ತೀರ್ಮಾನಿಸಲಾಗಿದೆ. ಶತಚಂಡಿಕಾಯಾಗಕ್ಕೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆಯನ್ನು ಚೆಂಡಿನಗದ್ದೆಯಲ್ಲಿ ಮಾಡಲಾಗುವುವುದು. ಹಾಗೂ ಶತಚಂಡಿಕಾಯಾಗಕ್ಕೆ ಬರುವ ಭಕ್ತಾದಿಗಳಿಗೆ ಬೆಳಿಗ್ಗಿನ ಉಪಹಾರದ ನ್ನು ಮಾಡಲಾಗುವುದು. ಶ್ರೀ ದೇವಳಕ್ಕೆ ಬರುವ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಸರದಿ ಸಾಲಿನಲ್ಲಿ ವ್ಯವಸ್ಥಿತವಾಗಿ ವ್ಯವಸ್ಥೆ ಮಾಡಲಾಗುವುದು. ಈ ಕಾರ್ಯಕ್ರಮ ಯಶ್ವಸಿಯಾಗಿ ನೆರೆವೇರಲು ಸಂಘ ಸ್ವಯಂ ಸೇವಕರು ತಮ್ಮ ತಂಡದ ಹೆಸರನ್ನು ನೋಂದಾಯಿಸುತ್ತಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಅಮ್ಮುಂಜೆಗುತ್ತು ಮಂಜಯ್ಯ ಶೆಟ್ಟಿ, ಅರ್ಚಕರಾದ ಪದ್ಮನಾಭ ಭಟ್, ಅನಂತಪದ್ಮನಾಭ ಭಟ್ ಉಪಸ್ಥಿತರಿದ್ದು, ಪೂರಕ ಮಾಹಿತಿ ನೀಡಿದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)