ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಪಕ್ಷದ ಮುಖಂಡರು, ಬ್ಲಾಕ್ ಸಮಿತಿ ಪದಾಧಿಕಾರಿಗಳಿಗೆನಾಯಕತ್ವ ತರಬೇತಿ ಶಿಬಿರ ಆಲಡ್ಕದ ಎಸ್ ಎಸ್ ಆಡಿಟೋರಿಯಂನಲ್ಲಿ ಕ್ಷೇತ್ರ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಅಧ್ಯಕ್ಷತೆಯಲ್ಲಿ ನಡೆಯಿತು.

https://www.opticworld.net/
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್, ಮಂಗಳೂರು ನಗರ ಜಿಲ್ಲೆಯ ಕಾರ್ಯದರ್ಶಿ ಶಮೀರ್ ಜೋಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸಲೀಂ ಗುರುವಾಯನಕೆರೆ ನಾಯಕತ್ವದ ತರಬೇತಿ ನೀಡಿದರು.
ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮೂನಿಷ್ ಆಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ್ಷೇತ್ರ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ ಸ್ವಾಗತಿಸಿದರು. ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ ಕಾರ್ಯಕ್ರಮ ನಿರೂಪಿಸಿ, ಕ್ಷೇತ್ರಾಧ್ಯಕ್ಷರಾದ ಸಾಹುಲ್ ಎಸ್ ಎಚ್ ಧನ್ಯವಾದಗೈದರು.
Be the first to comment on "ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ ನಾಯಕರಿಗೆ ತರಬೇತಿ ಶಿಬಿರ"