
https://www.opticworld.net/
ಬಿ.ಸಿ.ರೋಡಿನ ರಕ್ತೇಶ್ವರಿ ದೇವಿ ದೇವಸ್ಥಾನದ ಸಮೀಪ, ಮಿನಿ ವಿಧಾನಸೌಧದ ಎದುರು ಫೆ.23ರಿಂದ 28ರವರೆಗೆ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ದ್ವಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿ.ಸಿ.ರೋಡಿನಲ್ಲಿ ಮಾತ್ರ ಈ ಕಾರ್ಯಕ್ರಮ ಬ್ರಹ್ಮಾಕುಮಾರಿ ವಿವಿ ವತಿಯಿಂದ ನಡೆಯಲಿದೆ.
ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಬಂಟ್ವಾಳ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಸಾವಿತ್ರಿ ಅವರು ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 23ರ ಭಾನುವಾರ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಸಂಜೆ 5 ಗಂಟೆಗೆ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುವರು. ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಗಣ್ಯರು ಭಾಗವಹಿಸುವರು.26ರ ಶಿವರಾತ್ರಿಯಂದು ಸಭಾ ಕಾರ್ಯಕ್ರಮವಿದ್ದು, ಪೊಳಲಿ ತಪೋವನದ ಶ್ರೀ ವಿವೇಕಚೈತನ್ಯಾನಂದ ಸ್ವಾಮೀಜಿ ಆಗಮಿಸಲಿದ್ದಾರೆ. 28ರಂದು ಸಂಜೆ ಸಮಾರೋಪದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಭಾಗವಹಿಸಲಿದ್ದು, ಶಾಸಕ ರಾಜೇಶ್ ನಾಯ್ಕ್ ಸಹಿತ ಪ್ರಮುಖರು ಉಪಸ್ಥಿತರಿರುತ್ತಾರೆ. ಅಂದು ಸಂಜೆ ಯಕ್ಷಗಾನ ಕಾರ್ಯಕ್ರಮ ಶಿವಮಹಾತ್ಮೆ ನಡೆಯಲಿದೆ ಎಂದರು.ಸೋಮನಾಥ, ಮಲ್ಲಿಕಾರ್ಜುನ, ಮಹಾಕಾಲೇಶ್ವರ, ಓಂಕಾರೇಶ್ವರ, ವೈದ್ಯನಾಥ, ಭೀಮಾಶಂಕರ, ರಾಮೇಶ್ವರ, ನಾಗೇಶ್ವರ, ವಿಶ್ವನಾಥ, ತ್ರಯಂಬಕೇಶ್ವರ, ಕೇದಾರನಾಥ, ಗ್ರೀಷ್ಣೇಸ್ವರ ಲಿಂಗ ದರ್ಶನ ಕಾರ್ಯಕ್ರಮಗಳು ನಡೆಯಲಿದೆ ಎಂದವರು ಮಾಹಿತಿ ನೀಡಿದರು. ಸಂಯೋಜಕ ಬ್ರಹ್ಮಕುಮಾರ ಗಣಪತಿ ಅವರು ಉಪಸ್ಥಿತರಿದ್ದರು.
Be the first to comment on "ಬಿ.ಸಿ.ರೋಡಿನಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದ್ವಾದಶ ಜ್ಯೋತಿರ್ಲಿಂಗ ದರ್ಶನ"