
https://www.opticworld.net/
ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲ್ಲೈಸಿ ಕಚೇರಿ ಮುಂಭಾಗ ಸೋಮವಾರ ನಡೆದಿದೆ.
ಸೋಮವಾರ ಬೆಳಗ್ಗೆ ಎಲ್ಲೈಸಿ ಕಚೇರಿಯಲ್ಲಿ ಕೆಲಸ ಮುಗಿಸಿ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (೫೦) ಅವರಿಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ವೇಳೆ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ತುಂಬೆಯಲ್ಲಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಪತಿ ಎಲ್ಲೈಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮವೊಂದು ಇದ್ದ ಕಾರಣ ಇವರು ಬಂದಿದ್ದರು ಎನ್ನಲಾಗಿದೆ. ಪಾಣೆಮಂಗಳೂರಿನ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರಸ್ವತಿ ಅವರು ಪತಿ , ಇಬ್ಬರು ಪುತ್ರರನ್ನು ಅಗಲಿದ್ದಾರೆ.
Be the first to comment on "ರಸ್ತೆ ದಾಟುತ್ತಿದ್ದ ಮಹಿಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವು"