https://www.opticworld.net/
PHOTO COURTESY: DINESH SHETTY PHARANGIPETE
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಎಂಬವರ ಪುತ್ರ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆ ಹಾಗೂ ಸರಕಾರದ ಮೇಲೆ ಒತ್ತಡ ಹಾಕಲು ಫರಂಗಿಪೇಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೆಲ ಕಾಲ ಪೇಟೆ ಬಂದ್ ಮಾಡಿ ಬಾಲಕನ ಪತ್ತೆಗೆ ಒತ್ತಾಯ ಮಾಡಲಾಯಿತು. ಈ ಸಂದರ್ಭ ಎಲ್ಲರೂ ಬಂದ್ ನಡೆಸಿ ಬೆಂಬಲ ಸೂಚಿಸಿದರು.ಈ ಸಂದರ್ಭ ಮಾತನಾಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್, ತಂಡಗಳಾಗಿ ನಾವು ತನಿಖೆ ನಡೆಸುತ್ತಿದ್ದು, ಸಹಕಾರ ಕೋರಿದರು.
ಸಂಸದ, ಶಾಸಕರ ಭೇಟಿ
ಪ್ರತಿಭಟನಾ ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಗಾಂಜಾ ವಿರುದ್ಧ ಪೋಲೀಸರು ತನಿಖೆ ಮುಂದುವರಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡರೆ ಇಂತಹ ಘಟನೆಗಳು ಮರುಕಳಿಸಲಿಕ್ಕಿಲ್ಲ. ಪೊಲೀಸರು ಸದೃಢ ತನಿಖೆ ನಡೆಸಬೇಕು ಎಂದು ತಿಳಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ , ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು. ಈ ಸಂದರ್ಭ ಎರಡು ದಿನಗಳಲ್ಲಿ ಬಾಲಕ ಪತ್ತೆಯಾಗದಿದ್ದರೆ, ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ವಿವಿಧ ಮುಖಂಡರಾದ ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ ತೇವು, ನಂದನ್ ಮಲ್ಯ, ಮನೋಜ್ ಆಚಾರ್ಯ, ರವೀಂದ್ರ ಕಂಬಳಿ ಮತ್ತಿತರರು ಇದ್ದರು.