
https://www.opticworld.net/
ಬಂಟ್ವಾಳ ತಾಲೂಕಿನ ಬಿ..ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಏ.4ರಿಂದ ಎ.9ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಶನಿವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು.
ಕ್ಷೇತ್ರದ ತಂತ್ರಿಯವರಾದ ಬ್ರಹ್ಮಶ್ರೀ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿವರೇಣ್ಯರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಮಾತನಾಡಿ, ತುಳುನಾಡಿನಲ್ಲಿ ಜನರ ಜೀವನದಲ್ಲಿ ಬ್ರಹ್ಮಕಲಾಶಾಽ ಕಾರ್ಯಕ್ರಮಗಳು ಆಧ್ಯಾತ್ಮಿಕವಾಗಿ, ಭೌತಿಕವಾಗಿ, ದೈವಿಕವಾಗಿ ಹಾಸು ಹೊಕ್ಕಿದೆ. ದೇವಸ್ಥಾನಗಳಿಂದ ಕಲೆ, ಸಂಸ್ಕೃತಿಗಳಿಗೆ ಉತ್ತೇಜನ ದೊರಕುತ್ತದೆ. ಭಾರತೀಯ ಸನಾತನ ಸಂಸ್ಕೃತಿಯನ್ನು ಅರಿತು ಬಾಳ ಬೇಕು ಎಂದರು. ತನ್ನ ಮೇಲೆ ಮತ್ತು ದೇವರ ಮೇಲೆ ನಂಬಿಕೆ ಇರಿಸಿದಾಗ ಯಾವುದೇ ಸಾಧನೆ ಮಾಡಲು ಸಾಧ್ಯ.ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಇಂದು ಪ್ರಪಂಚ ಶಾಂತಿಗಾಗಿ, ಆಧ್ಯಾತ್ಮಿಕತೆಗಾಗಿ ನಮ್ಮ ದೇಶದತ್ತ ನೋಡುತ್ತಿದೆ.ಆದುದರಿಂದ ನಿರಂತರ ಚಿಂತನೆಯುಳ್ಳ, ಕ್ರಿಯಾಶೀಲವಾದ ಸನಾತನವಾದ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ದೇವಸ್ಥಾನಗಳ ಅಭಿವೃದ್ಧಿಗಾಗಿ ಕೈ ಜೋಡಿಸಬೇಕು. ದೇವರ ಅನುಗ್ರಹದಿಂದ ಬ್ರಹ್ಮಕಲಶೋತ್ಸವ ಯಶಸ್ವಿಯಾಗಲಿ ಎಂದು ನುಡಿದರು.
ಬ್ರಹ್ಮ ಕಲಶೋತ್ಸವ ಸಮಿತಿ ಅದ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ರಹ್ಮಕಲಶೋತ್ಸವಕ್ಕೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಎಲ್ಲರೂ ಕೈ ಜೋಡಿಸಬೇಕು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಹೇಳಿದರು. ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ , ಸಮಿತಿ ಸಹ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಮಾಣಿ ಬದಿಗುಡ್ಡೆ ಅವರು ಶುಭ ಹಾರೈಸಿದರು.
ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಸೇವಾ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ, ಬ್ರಹ್ಮ ಕಲಶೋತ್ಸವ ಸಮಿತಿ ಕೋಶಾಧಿಕಾರಿ ನಾರಾಯಣ ಹೆಗ್ಡೆ ಅವರು ವೇದಿಕೆಯಲ್ಲಿದ್ದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ನ್ಯಾಯವಾದಿ ಅಶ್ವನಿ ಕುಮಾರ್ ರೈ, ಪ್ರಮುಖರಾದ ರಾಜೇಶ್ ಎಲ್. ನಾಯಕ್, ಬಿ.ಮೋಹನ್, ದಿವಾಕರ ಪಂಬದಬೆಟ್ಟು, ಲೋಕನಾಥ ಶೆಟ್ಟಿ, ಸತೀಶ್ ಭಂಡಾರಿ, ಗೋಪಾಲ ಸುವರ್ಣ, ಚಂದ್ರಶೇಖರ ಪೂಜಾರಿ, ಉಮೇಶ್ ಕುಮಾರ್ ವೈ, ಸದಾನಂದ ಶೆಟ್ಟಿ, ರಮೇಶ್ ಸಾಲ್ಯಾನ್, ರವೀಂದ್ರ ಕಂಬಳಿ, ಪ್ರಸಾದ್ ಕುಮಾರ್ ರೈ ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಕಾರ್ಯಾಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಅವರು ಸ್ವಾಗತಿಸಿದರು. ಬ್ರಹ್ಮ ಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಐತಪ್ಪ ಪೂಜಾರಿ ವಂದಿಸಿದರು. ಮೋಹನದಾಸ ಕೊಟ್ಟಾರಿ ಹಾಗೂ ಸತೀಶ್ ಶೆಟ್ಟಿ ಮೊಡಂಕಾಪು ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಂತ್ರಿಯವರ ಹಾಗೂ ಕ್ಷೇತ್ರದ ಪ್ರ.ಅರ್ಚಕ ರಘುಪತಿ ಭಟ್ ಅವರ ಪೌರೋಹಿತ್ಯದಲ್ಲಿ ಬಾಲಾಲಾಯ ಪ್ರತಿಷ್ಠೆ ನಡೆಯಿತು.
Be the first to comment on "ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ, ಬಾಲಾಲಯ ಪ್ರತಿಷ್ಠೆ"