ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮಂಗಳವಾರ ಬೆಳಗ್ಗೆ ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾಗಿದೆ.

https://www.opticworld.net/
ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮಂಗಳವಾರ ಬೆಳಗ್ಗೆ ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾಗಿದೆ.
ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕ್ಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಅದಕ್ಕಾಗಿಯೇ ಬೆಂಗಳೂರಿನಿಂದ ಇಲ್ಲಿಗೆ ಬಂದು ಸಾಯಲು ಯತ್ನಿಸಿದ್ದರು ಎನ್ನಲಾಗಿದೆ. ಈ ಸಂದರ್ಭ ನದಿಯಲ್ಲಿ ಟ್ಯೂಬ್ ಮೂಲಕ ಕಾರ್ಯಾಚರಣೆ ನಡೆಸಿದ ಸತ್ಯ (ಸತೀಶ್) ಹಾಗೂ ಉಪವಾಸ ಇದ್ದರೂ ಕಾರ್ಯಾಚರಣೆಗೆ ತೆರಳಿದ ಸಿದ್ಧೀಕ್ ಎಂ.ಕೆ.ರೋಡ್ ಆತ್ಮಹತ್ಯೆಗೆ ಯತ್ನಿಸಿದಾತನನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದರು. ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ ನಂತರ ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Be the first to comment on "ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನ"